Connect with us

    KARNATAKA

    ಬೈಕ್ ಗೆ ಖಾಸಾಗಿ ಬಸ್ ಡಿಕ್ಕಿ – ಯುವಕ ಮೃತ್ಯು…!!

    ಖಾಸಗಿ ಬಸ್ ಹಾಗೂ ಬೈಕ್ ನಡುವೆ ಮುಖಾಮುಖಿ ಡಿಕ್ಕಿಯಾಗಿ ಬೈಕ್ ಸವಾರ ಮೃತಪಟ್ಟ ಘಟನೆ ದಾವಣಗೆರೆ ಹೊನ್ನಳಿಯ ಹರಳಹಳ್ಳಿ ಗ್ರಾಮದಲ್ಲಿ ನಡೆದಿದೆ.

    ದಾವಣಗೆರೆ : ಖಾಸಗಿ ಬಸ್ ಹಾಗೂ ಬೈಕ್ ನಡುವೆ ಮುಖಾಮುಖಿ ಡಿಕ್ಕಿಯಾಗಿ ಬೈಕ್ ಸವಾರ ಮೃತಪಟ್ಟ ಘಟನೆ ದಾವಣಗೆರೆ ಹೊನ್ನಳಿಯ ಹರಳಹಳ್ಳಿ ಗ್ರಾಮದಲ್ಲಿ ನಡೆದಿದೆ.

    ಸತೀಶ್ ಎಂ.ಎಸ್.(24) ಮೃತ ಬೈಕ್ ಸವಾರನಾಗಿದ್ದಾನೆ .

    ಹೊನ್ನಾಳಿ ಕಡೆಯಿಂದ ನ್ಯಾಮತಿಗೆ ತೆರಳುತ್ತಿದ್ದ ಖಾಸಗಿ ಬಸ್ ನ್ಯಾಮತಿ ಪಟ್ಟಣದ ಹೊರ ವಲಯದಲ್ಲಿ ಎದುರಿಗೆ ಬರುತ್ತಿದ್ದ ಬೈಕ್‌ಗೆ ಡಿಕ್ಕಿಯಾಗಿದೆ ಎಂದು ತಿಳಿದು ಬಂದಿದೆ.

    ಘಟನೆಯಲ್ಲಿ ಬೈಕ್ ಸವಾರ ಸತೀಶ್ ತೀವ್ರ ಗಾಯಗೊಂಡಿದ್ದರು.

    ತಕ್ಷಣ ಅವರನ್ನು ಸ್ಥಳೀಯರು ಪಟ್ಟಣದ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಚಿಕಿತ್ಸೆ ಕೊಡಿಸಿ, ಹೆಚ್ಚಿನ ಚಿಕಿತ್ಸೆಗಾಗಿ ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಿದ್ದರು. ಆದರೆ ಅವರು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ.

    ಈ ಕುರಿತು ನ್ಯಾಮತಿ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ.ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

    Share Information
    Advertisement
    Click to comment

    You must be logged in to post a comment Login

    Leave a Reply