KARNATAKA
ಪುತ್ರಿಯನ್ನ ಶಾಲೆಗೆ ಬಿಡಲು ಹೊರಟಿದ್ದ ತಾಯಿ- ಮಗಳಿಗೆ ಬಸ್ ಡಿಕ್ಕಿ, ಇಬ್ಬರೂ ಸ್ಥಳದಲ್ಲೇ ಸಾವು..!
ತುಮಕೂರು : ಪುತ್ರಿಯನ್ನ ಶಾಲೆಗೆ ಬಿಡಲು ಹೊರಟಿದ್ದ ತಾಯಿ- ಮಗಳಿಗೆ ಖಾಸಾಗಿ ಬಸ್ ಡಿಕ್ಕಿ ಹೊಡೆದಿದ್ದು , ತಾಯಿ ಮಗಳು ಸ್ಥಳದಲ್ಲೇ ಸಾವನ್ನಪ್ಪಿದ ದಾರುಣ ಘಟನೆ ತುಮಕೂರಿನ ತಿಪಟೂರಿನಲ್ಲಿ ನಡೆದಿದೆ.
ಕಮಲಮ್ಮ ಸೋಮವಾರ ಬೆಳಗ್ಗೆ ಎಂದಿನಂತೆ ಮಗಳನ್ನ ಶಾಲೆಗೆ ಬಿಡಲು ತೆರಳುತ್ತಿದ್ದರು. ಈ ವೇಳೆ ಹಿಂಬದಿಯಿಂದ ಬಂದ ಖಾಸಾಗಿ ಗಾರ್ಮೆಂಟ್ಸ್ ಬಸ್ ಏಕಾಏಕಿ ತಾಯಿ ಮಗಳಿಗೆ ಡಿಕ್ಕಿ ಹೊಡೆದಿದಿದ್ದು ಡಿಕ್ಕಿ ಹೊಡೆದ ಪರಿಣಾಮ ತಾಯಿ ಮಗಳು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಕಮಲಮ್ಮ (35) ಹಾಗೂ ವೀಣಾ (16) ಮೃತ ದುರ್ದೈವಿಗಳು. ಮೃತ ವೀಣಾ 10 ನೇ ತರಗತಿ ಓದುತ್ತಿದ್ದಳು ಎಂದು ತಿಳಿದು ಬಂದಿದೆ. ಘಟನೆಯಲ್ಲಿ ಮತ್ತೊರ್ವ ಬೈಕ್ ಸವಾರನಿಗೆ ಗಂಭೀರವಾದ ಗಾಯವಾಗಿದೆ ಎಂದು ತಿಳಿದು ಬಂದಿದೆ. ಮುದ್ದಪ್ಪ (50) ಗಾಯಾಳು. ಗಾಯಾಳುವನ್ನ ತಿಪಟೂರು ತಾಲೂಕು ಆಸ್ಪತ್ರೆಯಲ್ಲಿ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ.
ಘಟನಾ ಸ್ಥಳಕ್ಕೆ ತಿಪಟೂರು ಗ್ರಾಮಾಂತರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಅಧಿಕಾರಿಗಳ ಬೇಜವ್ದಾರಿತನಕ್ಕೆ ಇವರಿಬ್ಬರ ಸಾವಾಗಿದೆ ಎಂದು ಗ್ರಾಮಸ್ಥರು ರಸ್ತೆ ತಡೆದು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಮೃತದೇಹಗಳನ್ನ ರಸ್ತೆಯಲ್ಲಿಟ್ಟು ಸ್ಥಳೀಯರು ಪ್ರತಿಭಟನೆಗೆ ಮುಂದಾಗಿದ್ದರು. ಹಲವು ಬಾರಿ ಅಂಡರ್ ಪಾಸ್ ನಿರ್ಮಿಸುವಂತೆ ಮನವಿ ಮಾಡಿದರು ಅಧಿಕಾರ ನಿರ್ಲಕ್ಷ್ಯ ಎಂದು ಗ್ರಾಮಸ್ಥರು ಆರೋಪಿಸಿದ್ದಾರೆ. ಅಧಿಕಾರಿಗಳು ಸ್ಥಳಕ್ಕೆ ಬರುವವರೆಗೂ ಶವವನ್ನ ಎತ್ತಲ್ಲ ಎಂದು ಪ್ರತಿಭಟನೆ ನಡೆಸಿದ್ದಾರೆ. ಈ ಮಧ್ಯೆ ಪೊಲೀಸರು ಹಾಗೂ ಸ್ಥಳೀಯರ ನಡುವೆ ಮಾತಿನ ಚಕಮಕಿ ನಡೆದಿದೆ.