Connect with us

    KARNATAKA

    ಖಾಸಗಿ ಬಸ್ ಪಲ್ಟಿ- ಮೂವರ ದುರ್ಮರಣ, 38 ಮಂದಿಗೆ ಗಾಯ

    ಚಿತ್ರದುರ್ಗ, ಏಪ್ರಿಲ್ 07: ಖಾಸಗಿ ಬಸ್ಸೊಂದು ಪಲ್ಟಿಯಾಗಿ ಮೂವರು ಪ್ರಯಾಣಿಕರು ಸ್ಥಳದಲ್ಲೇ ದುರ್ಮರಣಕ್ಕೀಡಾಗಿರುವ ಘಟನೆ ಚಿತ್ರದುರ್ಗ ಜಿಲ್ಲೆ ಹೊಳಲ್ಕೆರೆ ಪಟ್ಟಣದ ಕಣಿವೆ ಬಳಿ ನಡೆದಿದೆ.

    ಬೆಂಗಳೂರಿನಿಂದ ಶಿವಮೊಗ್ಗಕ್ಕೆ ತೆರಳುತ್ತಿದ್ದ ಖಾಸಗಿ ಸ್ಲೀಪರ್‌ಕೋಚ್ ಬಸ್ ಬೆಳಗ್ಗಿನ ಜಾವ 4:30ರ ಸಮಯದಲ್ಲಿ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿದೆ.

    ಈ ಬಸ್‌ನಲ್ಲಿ 50 ಜನ ಪ್ರಯಾಣ ಬೆಳೆಸಿದ್ದು, ಬಸ್ ಪಲ್ಟಿಯಿಂದಾಗಿ 38 ಜನರು ಗಾಯಗೊಂಡಿದ್ದಾರೆ. ಇಬ್ಬರು ಪ್ರಯಾಣಿಕರ ಸ್ಥಿತಿ ಗಂಭೀರವಾಗಿದೆ. ಉಳಿದ ಗಾಯಾಳುಗಳಿಗೆ ಹೊಳಲ್ಕೆರೆ ತಾಲೂಕು ಆಸ್ಪತ್ರೆಯಲ್ಲಿ ನೆಲದ ಮೇಲೆ ಬೆಡ್ ಹಾಕಿ ಚಿಕಿತ್ಸೆ ನೀಡಲಾಗುತ್ತಿದೆ

    ಮೃತ ಮೂವರ ದೇಹಗಳನ್ನು ಶವಗಾರಕ್ಕೆ ಶಿಫ್ಟ್ ಮಾಡಲಾಗಿದೆ. ಘಟನಾ ಸ್ಥಳಕ್ಕೆ ಹೊಳಲ್ಕೆರೆ ಪಿಎಸ್‌ಐ ಸುರೇಶ್ ಭೇಟಿ ನೀಡಿ, ಪರಿಶೀಲನೆ ನೆಡೆಸಿದ್ದಾರೆ. ಈ ಘಟನೆ ಹೊಳಲ್ಕೆರೆ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

    Share Information
    Advertisement
    Click to comment

    You must be logged in to post a comment Login

    Leave a Reply