Connect with us

    LATEST NEWS

    ಮಂಗಳೂರು – ಮಹೇಶ್ ಬಸ್ ಮಾಲೀಕ ಪ್ರಕಾಶ್ ಆತ್ಮಹತ್ಯೆಗೆ ಶರಣು

    ಮಂಗಳೂರು ಅಕ್ಟೋಬರ್ 01: ಮಂಗಳೂರಿನ ಖಾಸಗಿ ಬಸ್ ನ ಮಾಲೀಕರೊಬ್ಬರು ತಾವು ಇರುವ ಅಪಾರ್ಟ್ ಮೆಂಟ್ ನಲ್ಲಿ ನೇಣು ಬಿಗಿದು ಆತ್ಮಹತ್ಯೆಗೆ ಶರಣಾಗಿದ್ದಾರೆ.

    ಮೃತರನ್ನು ಮಹೇಶ್ ಬಸ್ ಮಾಲೀಕ  ಪ್ರಕಾಶ್ ಶೇಖ ಎಂದು ಗುರುತಿಸಲಾಗಿದೆ. ಅವರು ಕದ್ರಿ ಕಂಬಳ ಸಮೀಪ ಇರುವ ಅಪಾರ್ಟ್ ಮೆಂಟ್ ನೇಣು ಬಿಗಿದು ಆತ್ಮಹತ್ಯೆಗೆ ಶರಣಾಗಿದ್ದಾರೆ. ಆತ್ಮಹತ್ಯೆಗೆ ಕಾರಣ ತಿಳಿದು ಬಂದಿಲ್ಲ. ಉಡುಪಿ ಹಾಗೂ ದಕ್ಷಿಣಕನ್ನಡ ಜಿಲ್ಲೆಯಲ್ಲಿ ಮಹೇಶ್ ಹೆಸರಿನಲ್ಲಿ ಹಲವಾರು ಸಿಟಿ ಬಸ್ ಗಳು ದಿನನಿತ್ಯ ಸಂಚರಿಸುತ್ತಿದ್ದು, ಜನಮನ್ನಣೆ ಪಡೆದಿದೆ.

    ಬಸ್ ಉದ್ಯಮದ ಬಗ್ಗೆ ಭಾರೀ ಪ್ರೀತಿ ಇಟ್ಟುಕೊಂಡಿದ್ದ ಪ್ರಕಾಶ್ ಯಾಕಾಗಿ ಸಾವಿಗೆ ಶರಣಾಗಿದ್ದಾರೆ ಎನ್ನುವುದು ಆಪ್ತ ಬಳಗಕ್ಕೆ ಶಾಕ್ ನೀಡಿದೆ.  ಕದ್ರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

    Share Information
    Advertisement
    Click to comment

    You must be logged in to post a comment Login

    Leave a Reply