LATEST NEWS
ಉಡುಪಿ -ಬಸ್ ನಲ್ಲಿ ಅಸ್ವಸ್ಥಗೊಂಡಿದ್ದ ಯುವತಿಯನ್ನು ಆಸ್ಪತ್ರೆಗೆ ಬಸ್ ನಲ್ಲೇ ಕರೆದುಕೊಂಡ ಬಂದ ಸಿಬ್ಬಂದಿ
ಉಡುಪಿ ಅಗಸ್ಟ್ 05 : ಬಸ್ ನಲ್ಲಿ ಸಂಚರಿಸುತ್ತಿರುವ ವೇಳೆ ಗಂಭೀರವಾಗಿ ಅಸ್ವಸ್ಥಗೊಂಡಿದ್ದ ಯುವತಿಯೊಬ್ಬಳನ್ನು ಚಾಲಕ ಬಸ್ ನಲ್ಲೇ ಆಸ್ಪತ್ರೆಗೆ ಕರೆದುಕೊಂಡು ಹೋದ ಘಟನೆ ಉಡುಪಿಯಲ್ಲಿ ನಡೆದಿದೆ. ಕರಾವಳಿಯಲ್ಲಿ ಖಾಸಗಿ ಬಸ್ ಸಿಬ್ಬಂದಿಯ ಸಮಯಪ್ರಜ್ಞೆಗೆ ಜನರು ಮೆಚ್ಚುಗೆ ಸೂಚಿಸಿದ್ದಾರೆ.
ಉಡುಪಿಯಲ್ಲಿ ಈ ಘಟನೆ ನಡೆದಿದ್ದು, ಶಿರ್ವ ದಿಂದ ಉಡುಪಿಗೆ ಬರುತ್ತಿದ್ದ ನವೀನ್ ಎಂಬ ಬಸ್ ನಲ್ಲಿ ಪ್ರಯಾಣಿಸುತ್ತಿದ್ದ ಯುವತಿಯೊಬ್ಬಳು ಬಸ್ ಉಡುಪಿಯ ಹಳೆ ತಾಲ್ಲೂಕು ಕಚೇರಿ ಬರುವಾಗ ಅಸ್ವಸ್ಥಗೊಂಡಿದ್ದಾಳೆ.
ಬಸ್ ನಲ್ಲೇ ವಾಂತಿ ಮಾಡಿ ಪ್ರಜ್ಞಾಹೀನ ಸ್ಥಿತಿಗೆ ತಲುಪಿದ ಯುವತಿಯನ್ನು ಬಸ್ ಚಾಲಕ ಕೂಡಲೇ ಹತ್ತಿರದ ಡಾಕ್ಟರ್ ಟಿಎಂಎ ಪೈ ಆಸ್ಪತ್ರೆಗೆ ಬಸ್ ನಲ್ಲೇ ಕರೆದುಕೊಂಡು ಹೋಗಿದ್ದಾರೆ. ಕೂಡಲೇ ಯುವತಿಗೆ ಪ್ರಥಮ ಚಿಕಿತ್ಸೆ ನೀಡಲಾಗಿದೆ. ಯುವತಿಯ ಮನೆಯವರಿಗೆ ಮಾಹಿತಿ ನೀಡಿ ಮನೆಯವರು ಬರುವ ತನಕ ಯುವತಿಗೆ ಚಿಕಿತ್ಸೆಗೆ ಬಸ್ ಸಿಬ್ಬಂದಿ ಸಹಕಾರ ನೀಡಿದ್ದಾರೆ. ನವೀನ್ ಬಸ್ ನ ಚಾಲಕ ಶಶಿಕಾಂತ್, ನಿರ್ವಾಹಕ ಸಲೀಂ ಕಾರ್ಯಕ್ಕೆ ಸಾರ್ವಜನಿಕರ ಮೆಚ್ಚುಗೆ ವ್ಯಕ್ತವಾಗಿದೆ.
ಮಂಗಳೂರಿನಲ್ಲಿ ಇದೇ ರೀತಿ ಪ್ರಕರಣದಲ್ಲಿ ಎದೆ ನೋವಿನಿಂದ ಬಳಲುತ್ತಿದ್ದ ವಿಧ್ಯಾರ್ಥಿನಿಯನ್ನು ಆಸ್ಪತ್ರೆಗೆ ಸೇರಿಸಿ ಆಕೆಯ ಜೀವ ಉಳಿಸಲು ಬಸ್ ಸಿಬ್ಬಂದಿ ನೆರವಾಗಿದ್ದರು.
You must be logged in to post a comment Login