KARNATAKA
ಚಿಕ್ಕಮಗಳೂರು – ಖಾಸಗಿ ಬಸ್ ಪಲ್ಟಿ – 25ಕ್ಕೂ ಅಧಿಕ ಪ್ರಯಾಣಿಕರಿಗೆ ಗಾಯ

ಚಿಕ್ಕಮಗಳೂರು ಜುಲೈ 19: ಖಾಸಗಿ ಬಸ್ ಒಂದು ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ಘಟನೆ ಮೂಡಿಗೆರೆ ತಾಲೂಕಿನ ದೇವನ ಗೂಲ್ ಗ್ರಾಮದ ಬಳಿ ನಡೆದಿದೆ. ಅಪಘಾತದಲ್ಲಿ 25ಕ್ಕೂ ಅಧಿಕ ಮಂದಿಗೆ ಗಾಯಗಳಾಗಿದೆ ಎಂದು ವರದಿಯಾಗಿದೆ.
ಬೆಂಗಳೂರಿನಿಂದ ಕುದುರೆಮುಖಕ್ಕೆ ಪ್ರವಾಸಕ್ಕೆ ಹೋಗುತ್ತಿದ್ದಾಗ ಈ ಅಪಘಾತ ಸಂಭವಿಸಿದೆ. ವೀಕೆಂಡ್ ಹಿನ್ನೆಲೆ ಎಂ.ಎನ್.ಸಿ ಕಂಪನಿಯಲ್ಲಿ ಕೆಲಸ ಮಾಡುವ 40ಕ್ಕೂ ಹೆಚ್ಚು ಯುವಕ – ಯುವತಿಯರು ನೇತ್ರಾವತಿ ಪೀಕ್ ಟ್ರಕ್ಕಿಂಗ್‍ಗೆ ಬಂದಿದ್ದರು. ತಿರುವಿನಲ್ಲಿ ಚಾಲಕನ ನಿಯಂತ್ರಣ ತಪ್ಪಿ ಬಸ್ ಪಲ್ಟಿಯಾಗಿದೆ. ಅಪಘಾತದಲ್ಲಿ 25ಕ್ಕೂ ಹೆಚ್ಚು ಜನರಿಗೆ ಗಾಯಗಳಾಗಿವೆ. ಇಬ್ಬರ ಸ್ಥಿತಿ ಗಂಭೀರವಾಗಿದೆ.
ಗಾಯಾಳುಗಳನ್ನು ಮೂಡಿಗೆರೆ ಹಾಗೂ ಚಿಕ್ಕಮಗಳೂರು ಆಸ್ಪತ್ರೆಗೆ ದಾಖಲಿಸಲಾಗಿದೆ. ಮೂಡಿಗೆರೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ
