LATEST NEWS
ಮಂಗಳೂರು – ಖಾಸಗಿ ಬಸ್ ಪಲ್ಟಿ – ಹಲವರಿಗೆ ಗಾಯ
ಮಂಗಳೂರು: ಮಂಗಳೂರಿನಿಂದ ಬೆಂಗಳೂರಿಗೆ ಸಂಚರಿಸುತ್ತಿದ್ದ ಖಾಸಗಿ ಬಸ್ ಪಲ್ಟಿಯಾಗಿ ಹಲವು ಪ್ರಯಾಣಿಕರು ಗಾಯಗೊಂಡಿರುವ ಘಟನೆ ತುಂಬೆ ರಾಷ್ಟ್ರೀಯ ಹೆದ್ದಾರಿಯಲ್ಲಿ ಸೋಮವಾರ ರಾತ್ರಿ ನಡೆದಿದೆ.ಮಂಗಳೂರಿನಿಂದ ಬೆಂಗಳೂರಿಗೆ ಹೊರಟಿದ್ದ ಸೀ ಬರ್ಡ್ ಹೆಸರಿನ ಖಾಸಗಿ ಬಸ್ ತುಂಬೆ ಬಿ.ಎ. ಕಾಲೇಜು ಬಳಿಕ ರಾಷ್ಟ್ರೀಯ ಹೆದ್ದಾರಿಯ ಅಪಾಯಕಾರಿ ತಿರುವಿನಲ್ಲಿ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿದೆ.
ಬಸ್ ನಲ್ಲಿದ್ದ ಹಲವು ಪ್ರಯಾಣಿಕರಿಗೆ ಗಾಯಗಳಾಗಿದ್ದು ಹೆಚ್ಚಿನವರಿಗೆ ತುಂಬೆ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ದಾಖಲಿಸಲಾಗಿದೆ. ಕೆಲವರನ್ನು ಮಂಗಳೂರಿನ ಆಸ್ಪತ್ರೆಗೆ ಸಾಗಿಸಲಾಗಿದೆ ಎಂದು ಎಂದು ತಿಳಿದುಬಂದಿದೆ.
You must be logged in to post a comment Login