BANTWAL
ಬಂಟ್ವಾಳ : ಪರಂಗಿಪೇಟೆ ಹೆದ್ದಾರಿಯಲ್ಲಿ ಉರುಳಿದ ಖಾಸಾಗಿ ಬಸ್, 10 ಕ್ಕೂ ಅಧಿಕ ಮಂದಿಗೆ ಗಾಯ..!
ಬಂಟ್ವಾಳ, ಆ.16: ಚಾಲಕನ ನಿಯಂತ್ರಣ ತಪ್ಪಿ ಖಾಸಗಿ ಬಸ್ಸು ಪಲ್ಟಿಯಾಗಿ ಹತ್ತಕ್ಕೂ ಅಧಿಕ ಪ್ರಯಾಣಿಕರು ಗಂಭೀರವಾಗಿ ಗಾಯಗೊಂಡ ಘಟನೆ ಮಂಗಳೂರು ಹೊರವಲಯದ ರಾಷ್ಟ್ರೀಯ ಹೆದ್ದಾರಿ ಪರಂಗಿಪೇಟೆ ಸಮೀಪ ನಡೆದಿದೆ.
ಬೆಂಗಳೂರಿನಿಂದ ಮಂಗಳೂರಿಗೆ ಈ ಖಾಸಾಗಿ ಬಸ್ ಬರುತ್ತಿದ್ದು ಇಂದು ಬೆಳಗ್ಗೆ ಚಾಲಕನ ನಿಯಂತ್ರಣ ತಪ್ಪಿ ಉರುಳಿಬಿದ್ದಿದೆ. ಘಟನೆಯಲ್ಲಿ 10ಕ್ಕೂ ಅಧಿಕ ಪ್ರಯಾಣಿಕರು ಗಾಯಗೊಂಡಿದ್ದಾರೆ.
#REALWARFIGHTER brigadier I N Rai ‘ದೇಶಕ್ಕಾಗಿ ತ್ಯಾಗ ಮಾಡಿದವರ ಮುಂದೆ ನಾನು ಕಿರಿಯ’…! episode 1
ಚಾಲಕನ ಅತಿ ವೇಗದ ಚಾಲನೆ ಅಥವಾ ವಾಹನದಲ್ಲಿ ಕಂಡ ತಾಂತ್ರಿಕ ದೋಷಗಳಿಂದ ಅಪಘಾತ ಸಂಭವಿಸಿಬಹುದು ಎಂದು ಸ್ಥಳೀಯರು ಮಾಹಿತಿ ನೀಡಿದ್ದಾರೆ. ಬಸ್ ರಸ್ತೆ ವಿಭಜಕದ ಮಧ್ಯೆ ಇರುವ ವಿದ್ಯುತ್ ಕಂಬಕ್ಕೆ ಢಿಕ್ಕಿಯಾಗಿ ಎರಡು ಮರಗಳಿಗೆ ಢಿಕ್ಕಿ ಹೊಡೆದು ರಸ್ತೆ ಮಧ್ಯೆ ಉರುಳಿಬಿದ್ದಿದೆ. ಗಾಯಾಳುಗಳನ್ನು ಮಂಗಳೂರಿನ ಆಸ್ಪತ್ರೆಗೆ ಸಾಗಿಸಲಾಗಿದ್ದು ಅವರ ವಿವರ ಲಭ್ಯವಾಗಿಲ್ಲ..
ಇದನ್ನೂ ಓದಿ..
ಕಾಸರಗೋಡು:ಧ್ವಜರೋಹಣ ಸಂದರ್ಭ ಕರೆಂಟ್ ಶಾಕ್ ತಗುಲಿ ಚರ್ಚ್ ಧರ್ಮಗುರು ಮೃತ್ಯು, ಮತ್ತೋರ್ವ ಗಂಭೀರ..!