Connect with us

    KARNATAKA

    ಪ್ರೇಮಿಗಳ ‘ಆ’ ವಿಡಿಯೋ ಇಟ್ಟುಕೊಂಡು ಬ್ಲ್ಯಾಕ್ ಮೇಲ್ : ‘ಶೆಟ್ಟಿ ಲಂಚ್​ ಹೋಮ್’ ಜೋಡಿ ಅರೆಸ್ಟ್ ..!!

    ಪ್ರೇಮಿಗಳ ಖಾಸಗಿ ವಿಡಿಯೋ ಇಟ್ಟುಕೊಂಡು ಬ್ಲ್ಯಾಕ್ ಮೇಲ್ ಮಾಡುತ್ತಿದ್ದ ಉದ್ಯಮಿ ಜೋಡಿ ಇದೀಗ ಬೆಂಗಳೂರು ಪೊಲೀಸರ ಅತಿಥಿಯಾಗಿದ್ದಾರೆ.

    ಬೆಂಗಳೂರು : ಪ್ರೇಮಿಗಳ ಖಾಸಗಿ ವಿಡಿಯೋ ಇಟ್ಟುಕೊಂಡು ಬ್ಲ್ಯಾಕ್ ಮೇಲ್ ಮಾಡುತ್ತಿದ್ದ  ಉದ್ಯಮಿ ಜೋಡಿ ಇದೀಗ ಬೆಂಗಳೂರು ಪೊಲೀಸರ ಅತಿಥಿಯಾಗಿದ್ದಾರೆ.

    ನಯನಾ ಹಾಗೂ ಕಿರಣ್  ಬಂಧಿತ ಆರೋಪಿಗಳಾಗಿದ್ದಾರೆ.

    ಬೆಂಗಳೂರಿನ ಕೆಂಗೇರಿ ಮುಖ್ಯರಸ್ತೆಯಲ್ಲಿರುವ ಕೆಂಚನಾಪುರದಲ್ಲಿರುವ ಹೋಟೆಲ್‌ನಲ್ಲಿ ರಹಸ್ಯ ಕ್ಯಾಮೆರಾ ಇಟ್ಟು ಪ್ರೇಮಿಗಳ ವಿಡಿಯೋ ಸೆರೆ ಹಿಡಿದು ಬಳಿಕ ಬ್ಲ್ಯಾಕ್ ಮೇಲ್ ಮಾಡುತ್ತಿದ್ದ ಮಂಗಳೂರು ಹೊಟೇಲು ಉದ್ಯಮಿ ನಯನಾ ಹಾಗೂ ಪಾಲುದಾರ ಕಿರಣ್ ಎನ್ನವರನ್ನು ಪೊಲೀಸರು ಬಂಧಿಸಿದ್ದಾರೆ.

    ಪ್ರೇಮಿಗಳಿಗೆ ರೂಮ್ ವ್ಯವಸ್ಥೆ ಮಾಡಿಕೊಟ್ಟು ಅವರೇ ಲವರ್ಸ್ ಖಾಸಗಿ ವಿಡಿಯೋ ರಹಸ್ಯ ಕ್ಯಾಮೆರಾ ಇಟ್ಟುಕೊಂಡು ಶೂಟ್ ಮಾಡಿ ಲಕ್ಷ ಲಕ್ಷಣ ಹಣ ನೀಡುವಂತೆ ಬ್ಲ್ಯಾಕ್ ಮೇಲ್ ಗೆ ಇಳಿದಿದ್ದರು.

    ಕೆಂಗೇರಿ ಮುಖ್ಯರಸ್ತೆಯಲ್ಲಿರುವ ಶೆಟ್ಟಿ ಲಂಚ್ ಹೋಮ್ ಹೋಟೆಲ್ ನಲ್ಲಿ ಪ್ರೇಮಿಗಳಿಗೆ ರೂಮ್ ನೀಡಲಾಗಿತ್ತು.

    ಆದ್ರೆ, ರೂಮ್ ನಲ್ಲಿ ರಹಸ್ಯವಾಗಿ ಕ್ಯಾಮೆರಾ ಅಡಗಿಸಿ ಇಟ್ಟಿದ್ದರು. ಬಳಿಕ ನಯನಾ ಹಾಗೂ ಪಾರ್ಟರ್ ಕಿರಣ್ ಎನ್ನುವರು ಯುವತಿಗೆ ಬ್ಲ್ಯಾಕ್ ಮೇಲ್ ಮಾಡಿ ಹಣಕ್ಕೆ ಪೀಡಿಸುತ್ತಿದ್ದರು.

    ಒಂದು ಲಕ್ಷ ಹಣಕ್ಕೆ ನೀಡಬೇಕು. ಹಣ ಕೊಡದಿದ್ರೆ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಹರಿಬಿಡ್ತೀನಿ. ನಿಮ್ಮ ಸಂಬ0ಧಿಕರು ಹಾಗೂ ಸ್ನೇಹಿತರಿಗೆ ಕಳುಹಿಸುತ್ತೇನೆ ಎಂದು ಕಿರಣ್ ಬೆದರಿಕೆ ಹಾಕಿದ್ದ.

    ನಯನಾ ಹಾಗೂ ಕಿರಣ್ ಜೊತೆಯಾಗಿ ಕೆಂಗೇರಿ ಮುಖ್ಯರಸ್ತೆಯಲ್ಲಿರುವ ಕೆಂಚನಾಪುರದಲ್ಲಿ ಶೆಟ್ಟಿ ಲಂಚ್ ಹೋಮ್ ಹೋಟೆಲ್ ಆರಂಭಿಸಿದ್ದರು.

    ಅದೇ ಹೋಟೆಲ್ ಗೆ ನಯನಾ ಸಂಬಂಧಿ ಯುವತಿ ಆಗಾಗ ತನ್ನ ಪ್ರಿಯಕರ ಜೊತೆ ಬರುತ್ತಿದ್ದಳು.

    ಈ ವೇಳೆ ಹೋಟೆಲ್ ರೂಮ್ ನಲ್ಲಿ ಇರುವಂತೆ ಹೇಳಿದ್ದ ನಯನಾ, ಬಳಿಕ ಇಬ್ಬರ ಖಾಸಗಿ ವಿಡಿಯೋ ಚಿತ್ರೀಕರಣ ಮಾಡಿಕೊಂಡಿದ್ದಳು.

    ನಂತರ ಅವರೇ ರೂಮ್ ಕೊಟ್ಟು ಅಶ್ಲೀಲವಾಗಿ ವಿಡಿಯೋ ಎಡಿಟ್ ಮಾಡಿ ಯುವತಿಗೆ ಆರೋಪಿ ಕಿರಣ್, ವಾಟ್ಸಪ್ ಮಾಡಿ ಒಂದು ಲಕ್ಷ ರೂಪಾಯಿಗೆ ಬೇಡಿಕೆ ಇಟ್ಟಿದ್ದ.

    ಹಣ ಕೊಡದಿದ್ದರೆ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಹಾಕೋದಾಗಿ ಬೆದರಿಸುತ್ತಿದ್ದ.

    ಇದರಿಂದ ಯುವತಿ ಹೆದರಿಕೊಂಡು ಚಂದ್ರಲೇಔಟ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಳು.

    ಇದೀಗ ಈ ದೂರಿನ ಆಧಾರ ಮೇಲೆ ಪೊಲೀಸರು ನಯನಾ ಹಾಗೂ ಕಿರಣ್ ನನ್ನು ಬಂಧಿಸಿದ್ದಾರೆ.

     ಮಂಗಳೂರು ಶೆಟ್ಟಿ ಲಂಚ್ ಹೋಮ್ ಗೂ ಇದಕ್ಕೂ ಸಂಧಬಂಧವಿಲ್ಲ :

    ಮಂಗಳೂರು ಶೆಟ್ಟಿ ಲಂಚ್ ಹೋಮ್ ಗೂ ಇದಕ್ಕೂ ಯಾವುದೇ ಸಂಬಂಧ ಇಲ್ಲ. ಶೆಟ್ಟಿ ಲಂಚ್ ಹೋಮ್ ಗೆ ಯಾರು ಪಾರ್ಟರ್ ಇಲ್ಲ. ಮಂಗಳೂರಿನ ಅಡ್ಯಾರ್ ಮತ್ತು ಹಂಪನಕಟ್ಟೆಯಲ್ಲಿ ಮಾತ್ರ ಅದು ಬಿಟ್ಟು ಬೇರೆ ಶಾಖೆಗಳಿಲ್ಲ ಎಂದು ಮಂಗಳೂರು ಶೆಟ್ಟಿ ಲಂಚ್ ಹೋಮ್ ಮಾಲಕರು ಸ್ಪಷ್ಟಪಡಿಸಿದ್ದಾರೆ.

    Share Information
    Advertisement
    Click to comment

    You must be logged in to post a comment Login

    Leave a Reply