ಮಂಗಳೂರಿನಲ್ಲಿಂದು ಸಿಎಎ ಪರ ಸಮಾವೇಶ, ಸಂಚಾರದಲ್ಲಿ ಬದಲಾವಣೆ

ಮಂಗಳೂರು,ಜನವರಿ 27: ಕೇಂದ್ರದ ನರೇಂದ್ರ ಮೋದಿ ಸರಕಾರ ಜಾರಿಗೆ ತಂದಿರುವ ಸಿಎಎ ಕಾನೂನು ಬೆಂಬಲಿಸಿ ಇಂದು ಮಂಗಳೂರಿನಲ್ಲಿ ಸಮರ್ಥನಾ ಸಮಾವೇಶವನ್ನು ಆಯೋಜಿಸಲಾಗಿದೆ.

ಮಂಗಳೂರಿನ ಕೂಳೂರು ಗೋಲ್ಡ್ ಪಿಂಚ್ ಸಿಟಿ ಮೈದಾನದಲ್ಲಿ ನಡೆಯಲಿರುವ ಈ ಕಾರ್ಯಕ್ರಮದಲ್ಲಿ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಭಾಗವಹಿಸಲಿದ್ದಾರೆ.

ಸಂಜೆ 3 ಗಂಟೆಗೆ ಆರಂಭವಾಗಲಿರುವ ಈ ಸಭೆಯಲ್ಲಿ ಸುಮಾರು ಒಂದು ಲಕ್ಷಕ್ಕೂ ಮಿಕ್ಕಿ ಜನರು ಭಾಗವಹಿಸುವ ನಿರೀಕ್ಷೆಯಿದೆ.

ಈ ಹಿನ್ನಲೆಯಲ್ಲಿ ಮಂಗಳೂರಿನಲ್ಲಿ ಸಂಚಾರದಲ್ಲಿ ಬದಲಾವಣೆಯನ್ನು ಮಾಡಲಾಗಿದೆ.

ಉಡುಪಿ-ಮಂಗಳೂರು ವಾಹನ ಸಂಚಾರದಲ್ಲಿ ಬದಲಾವಣೆಯನ್ನು ಮಾಡಲಾಗಿದ್ದು, ಉಡುಪಿಯಿಂದ ಮಂಗಳೂರು ಬರುವ ಹಾಗೂ ಮಂಗಳೂರಿನಿಂದ ಉಡುಪಿಗೆ ತೆರಳುವ ವಾಹನಗಳು ಮೂಡಬಿದಿರೆ, ಪಡುಬಿದ್ರೆ ಮಾರ್ಗವಾಗಿ ತೆರಳಬೇಕಿದೆ.

ಕಾರ್ಯಕ್ರಮದಲ್ಲಿ ಕೇಂದ್ರ ಸಚಿವ ಪ್ರಹ್ಲಾದ್ ಜೋಷಿ, ಡಿ.ವಿ. ಸದಾನಂದ ಗೌಡ ಸೇರಿದಂತೆ ಹಲವು ಬಿಜೆಪಿ ಮುಖಂಡರು ಪಾಲ್ಗೊಳ್ಳಲಿದ್ದಾರೆ.

ಕಾರ್ಯಕ್ರಮಕ್ಕೆ ಭಾರೀ ಪೋಲೀಸ್ ಬಂದೋಬಸ್ತ್ ಏರ್ಪಡಿಸಲಾಗಿದೆ.

Facebook Comments

comments