Connect with us

    BELTHANGADI

    ಪಾಕಿಸ್ತಾನ ಪರ ಘೋಷಣೆ ಕೂಗಿದ ಎಸ್ ಡಿಪಿಐ ಕಾರ್ಯಕರ್ತರು

    ಬೆಳ್ತಂಗಡಿ ಡಿಸೆಂಬರ್ 30 : ಉಜಿರೆಯಲ್ಲಿ ಇಂದು ನಡೆಯುತ್ತಿರುವ ಗ್ರಾಮ ಪಂಚಾಯತ್ ಚುನಾವಣೆಯ ಮತಎಣಿಕೆ ಸಂದರ್ಭದಲ್ಲಿ ಎಸ್ ಡಿಪಿಐ ಕಾರ್ಯಕರ್ತರು ಪಾಕಿಸ್ತಾನ ಪರ ಘೋಷಣೆ ಕೂಗಿರುವ ಘಟನೆ ನಡೆದಿದೆ.


    ಗ್ರಾಮಪಂಚಾಯತ್ ಚುನಾವಣೆಯ ಮತ ಎಣಿಕೆ ಕಾರ್ಯ ಉಜಿರೆಯ ಎಸ್ ಡಿಎಂ ಕಾಲೇಜಿನಲ್ಲಿ ನಡೆಯುತ್ತಿದ್ದ ಈ ಸಂದರ್ಭ ಎಸ್ ಡಿಪಿಐ ಬೆಂಬಲಿತ ಅಭ್ಯರ್ಥಿಯ ಗೆಲುವಿನ ಸಂಭ್ರಮಾಚರಣೆಯಲ್ಲಿ ಎಸ್ ಡಿಪಿಐ ಕಾರ್ಯಕರ್ತರು ಪಾಕಿಸ್ತಾನ ಪರ ಘೋಷಣೆ ಕೂಗಿದ್ದು , ಪಾಕಿಸ್ತಾನ ಜಿಂದಾಬಾದ್ ಎಂದು ಘೋಷಣೆ ಕೂಗಿದ್ದಾರೆ.

    SDPI ವಿಜಯೋತ್ಸವ ವೇಳೆ ಪಾಕ್ ಪರ ಘೋಷಣೆ ವಿಚಾರಕ್ಕೆ ಸಂಬಂಧಿಸಿದಂತೆ ಬೆಳ್ತಂಗಡಿ ವೃತ್ತನಿರೀಕ್ಷಕ ಪಿ.ಜಿ ಸಂದೇಶ್ ನೇತೃತ್ವದಲ್ಲಿ ತನಿಖೆ ಆರಂಭಿಸಲಾಗಿದೆ. ದಕ್ಷಿಣಕನ್ನಡ‌ ಪೊಲೀಸ್ ವರಿಷ್ಠಾಧಿಕಾರಿ ಬಿ ಎಂ ಲಕ್ಷ್ಮೀಪ್ರಸಾದ್ ಸೂಚನೆ ಮೇರೆಗೆ ತನಿಖೆ ನಡೆಸಲಾಗುತ್ತಿದ್ದು, ವೈರಲ್ ಆಗಿರುವ ವಿಡಿಯೋ ಆಧರಿಸಿ ಬೆಳ್ತಂಗಡಿ ಪೊಲೀಸರು ತನಿಖೆ ಆರಂಭಿಸಿದ್ದು, ಘೋಷಣೆ ಕೂಗಿದವರ ಪತ್ತೆ ಹಚ್ಚಲು ಪ್ರಯತ್ನಿಸುತ್ತಿದ್ದಾರೆ. ಈ ನಡುವೆ ಎಸ್ ಡಿಪಿಐ ಪಕ್ಷದ ಬೆಳ್ತಂಗಡಿ ಘಟಕ ತನಿಖೆಗೆ ಸಂಪೂರ್ಣ ಸಹಕಾರದ ಭರವಸೆ ನೀಡಿದ್ದಾರೆ.

     

    Share Information
    Advertisement
    Click to comment

    You must be logged in to post a comment Login

    Leave a Reply