ಬೆಂಗಳೂರು, ಮಾರ್ಚ್ 26: ತರಗತಿ ನಡೆಯುತ್ತಿರುವ ವೇಳೆ ವಿದ್ಯಾರ್ಥಿನಿಗೆ ಪ್ರಪೋಸ್ ಮಾಡಿದ ಪ್ರೊಫೆಸರ್ ವಿರುದ್ಧ ವಿದ್ಯಾರ್ಥಿಗಳು ಆಕ್ರೋಶ ವ್ಯಕ್ತಪಡಿಸಿ ಹಲ್ಲೆ ನಡೆಸಿದ ಘಟನೆ ಬೆಂಗಳೂರು ಹೊರವಲಯದ ನೆಲಮಂಗಲ ತಾಲೂಕಿನ ಮೆಡಿಕಲ್ ಕಾಲೇಜಿನಲ್ಲಿ ನಡೆದಿದೆ.

ಅಬ್ದುಲ್ ಎಂಬ ಪ್ರೊಫೆಸರ್ ತರಗತಿಯಲ್ಲಿ ವಿದ್ಯಾರ್ಥಿನಿಗೆ ಚಾಕೊಲೇಟ್ ನೀಡಿ ಪ್ರಪೋಸ್ ಮಾಡಿರುವುದಾಗಿ ಆರೋಪಿಸಲಾಗಿದೆ. ಈ ವರ್ತನೆಗೆ ಅಸಮಾಧಾನಗೊಂಡ ವಿದ್ಯಾರ್ಥಿನಿ ತಕ್ಷಣವೇ ವಿರೋಧ ವ್ಯಕ್ತಪಡಿಸಿ, ಪ್ರೊಫೆಸರ್ನ್ನು ಚಪ್ಪಲಿಯಿಂದ ಹೊಡೆದಿದ್ದಾರೆ ಎಂದು ತಿಳಿದುಬಂದಿದೆ. ಘಟನೆ ಇದರಿಂದ ಉದ್ವಿಗ್ನಗೊಂಡು, ಇತರ ವಿದ್ಯಾರ್ಥಿಗಳು ಕೂಡ ಪ್ರೊಫೆಸರ್ ವಿರುದ್ಧ ತಿರುಗಿಬಿದ್ದು ಕ್ಯಾಂಪಸ್ನಲ್ಲೇ ಹಿಂಬಾಲಿಸಿ ಥಳಿಸಿದ್ದಾರೆ. ಬಳಿಕ ಕಾರಿನ ಬಳಿಯೂ ಹಲ್ಲೆ ಮುಂದುವರಿದಿದೆ ಎನ್ನಲಾಗಿದೆ. ಹಲ್ಲೆಯಿಂದ ಭಯಗೊಂಡ ಪ್ರೊಫೆಸರ್ ಸ್ಥಳದಿಂದ ತಪ್ಪಿಸಿಕೊಂಡು ಪರಾರಿಯಾಗಿದ್ದಾರೆ. ಈ ಕುರಿತು ನೆಲಮಂಗಲ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ಮುಂದುವರಿಸಿದ್ದಾರೆ.