LATEST NEWS
ಫೆಬ್ರವರಿ 26 ರವರೆಗೆ ದಕ್ಷಿಣಕನ್ನಡ ಜಿಲ್ಲೆಯಲ್ಲಿ ಶಾಲಾ ಕಾಲೇಜು ಸುತ್ತ ನಿಷೇಧಾಜ್ಞೆ

ಮಂಗಳೂರು ಫೆಬ್ರವರಿ 19: ಹಿಜಬ್ ವಿವಾದ ಇನ್ನೂ ಮುಗಿಯದ ಹಿನ್ನಲೆ ಮುಂಜಾಗೃತಾ ಕ್ರಮವಾಗಿ ದಕ್ಷಿಣಕನ್ನಡ ಜಿಲ್ಲೆಯಲ್ಲಿ ಎಲ್ಲಾ ಶಾಲಾ ಕಾಲೇಜುಗಳ ಸುತ್ತಮುತ್ತ ನಿಷೇಧಾಜ್ಞೆಯನ್ನು ಫೆಬ್ರವರಿ 26 ರವರೆಗೆ ವಿಸ್ತರಿಸಿ ದಕ್ಷಿಣಕನ್ನಡ ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ ಆದೇಶ ಹೊರಡಿಸಿದ್ದಾರೆ.
ಜಿಲ್ಲೆಯ ಎಲ್ಲಾ ಶಾಲೆ-ಕಾಲೇಜುಗಳ ಸುತ್ತಮುತ್ತ 200 ಮೀಟರ್ ಪ್ರದೇಶದಲ್ಲಿ ಫೆಬ್ರವರಿ 26ರ ಸಂಜೆ 6ರವರೆಗೆ ನಿಷೇಧಾಜ್ಞೆ ವಿಧಿಸಿ ಜಿಲ್ಲಾಧಿಕಾರಿ ಆದೇಶಿಸಿದ್ದಾರೆ. ಈಗಾಗಲೇ ರಾಜ್ಯಾದ್ಯಂತ ಹಿಜಬ್ ವಿವಾದ ತೀವ್ರಗೊಂಡಿದ್ದು, ಕಾಲೇಜು ಮುಂಭಾಗಗಳಲ್ಲಿ ಪ್ರತಿಭಟನೆ ನಡೆಯುತ್ತಿದೆ. ಈ ಹಿನ್ನಲೆ ಮುಂಜಾಗೃತಾ ಕ್ರಮವಾಗಿ ನಿಷೇಧಾಜ್ಞೆ ಮುಂದುವರೆಸಲಾಗಿದೆ.
