LATEST NEWS
ಮಣಿಪಾಲ – ವೇಶ್ಯಾವಾಟಿಕೆ ದಂಧೆ ಮೇಲೆ ಪೊಲೀಸ್ ರೈಡ್ – ಇಬ್ಬರು ಅರೆಸ್ಟ್

ಉಡುಪಿ, ಜುಲೈ 22: ಮಣಿಪಾಲದ ಮನೆಯೊಂದರಲ್ಲಿ ನಡೆಯುತ್ತಿದ್ದ ವೈಶ್ಯಾವಾಟಿಕೆ ಜಾಲವನ್ನು ಭೇದಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ. ಈ ಪ್ರಕರಣದಲ್ಲಿ ಇಬ್ಬರು ಆರೋಪಿಗಳನ್ನು ಬಂಧಿಸಿದ್ದು ಓರ್ವ ಪರಾರಿಯಾಗಿದ್ದಾನೆ.
ಬಂಧಿತರನ್ನು ವೇಶ್ಯಾವಾಟಿಕೆ ವ್ಯವಹಾರ ನಡೆಸುತ್ತಿದ್ದ ಅಬ್ದುಲ್ ಸಲಾಮತ್ ಹಾಗೂ ಚಂದ್ರಹಾಸ ಎಂದು ಗುರುತಿಸಲಾಗಿದೆ. ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿದ ಪೊಲೀಸರು ಅಬ್ದುಲ್ ಸಲಾಮತ್ ಹಾಗೂ ಚಂದ್ರಹಾಸ ಎಂಬವರನ್ನು ವಶಕ್ಕೆ ಪಡೆದು, ವೇಶ್ಯಾವಾಟಿಕೆ ವ್ಯವಹಾರ ನಡೆಸಲು ಬಳಸಿಕೊಂಡಿದ್ದ 5 ಮಂದಿ ಮಹಿಳೆಯರನ್ನು ರಕ್ಷಿಸಿದ್ದಾರೆ. ಇವರಲ್ಲಿ ಮೂವರ ಬೆಂಗಳೂರು ಮೂಲದ ನಿವಾಸಿಗಳಾಗಿದ್ದು, ಇನ್ನಿಬ್ಬರು ಮಹಾರಾಷ್ಟ್ರದ ನಾಸಿಕ್ ಹಾಗೂ ಮುಂಬೈ ನಿವಾಸಿಗಳಾಗಿದ್ದಾರೆ ಎಂದು ತಿಳಿದು ಬಂದಿದೆ.
