LATEST NEWS
ಖಾಸಗಿ ವೈದ್ಯರ ಮುಷ್ಕರ – ಸರಕಾರಿ ಆಸ್ಪತ್ರೆಗಳಲ್ಲಿ ಸೇವೆ ಲಭ್ಯ
ಖಾಸಗಿ ವೈದ್ಯರ ಮುಷ್ಕರ – ಸರಕಾರಿ ಆಸ್ಪತ್ರೆಗಳಲ್ಲಿ ಸೇವೆ ಲಭ್ಯ
ಮಂಗಳೂರು ಜುಲೈ 28:ಭಾರತೀಯ ವೈದ್ಯಕೀಯ ಪರಿಷತ್ ತಿದ್ದುಪಡಿ ವಿಧೇಯಕವನ್ನು ಸಂಸತ್ತಿನಲ್ಲಿ ಮಂಡನೆ ಮಾಡಲು ಕೇಂದ್ರ ಸರ್ಕಾರ ಮುಂದಾಗಿರುವುದನ್ನು ವಿರೋಧಿಸಿ ಖಾಸಗಿ ವೈದ್ಯರು ಇಂದು ದೇಶದಾದ್ಯಂತ ಹೊರರೋಗಿ ಸೇವೆ (ಒಪಿಡಿ) ಬಹಿಷ್ಕರಿಸಿ ಮುಷ್ಕರ ನಡೆಸುತ್ತಿದ್ದಾರೆ.
ದೇಶದ 2.15 ಲಕ್ಷ ಕ್ಕೂ ಅಧಿಕ ವೈದ್ಯರು ದೇಶಾದ್ಯಂತ ಇಂದು ದಿನ ಪೂರ್ತಿ ಕೆಲಸ ಸ್ಥಗಿತ ಗೊಳಿಸಿ ಪ್ರತಿಭಟನೆ ನಡೆಸುತ್ತಿದ್ದಾರೆ. ಖಾಸಗಿ ಆಸ್ಪತ್ರೆಗಳು ಮುಷ್ಕರ ನಡೆಸುತ್ತಿರುವ ಪರಿಣಾಮ ಇಂದು ಬಹುತೇಕ ಖಾಸಗಿ ಆಸ್ಪತ್ರೆಗಳಲ್ಲಿ ಒಪಿಡಿ ಸೇವೆ ಲಭ್ಯವಿರುವುದಿಲ್ಲ.
ಮಂಗಳೂರಿನಲ್ಲಿಯೂ ಖಾಸಗಿ ಆಸ್ಪತ್ರೆಗಳ ವೈದ್ಯರ ಮುಷ್ಕರದ ಬಿಸಿ ತಟ್ಟಿತೆ. ಎನ್ ಎಂ ಸಿ ಮಸೂದೆ ವಿರೋಧಿಸಿ ಕರೆ ನೀಡಲಾಗಿರುವ ಮುಷ್ಕರಕ್ಕೆ ಮಂಗಳೂರಿನ ಖಾಸಗಿ ಆಸ್ಪತ್ರೆಯ ವೈದ್ಯರು ಬೆಂಬಲ ಸೂಚಿಸಿದ್ದಾರೆ. ಈ ಹಿನ್ನೆಲೆಯಲ್ಲಿ ನಗರದ ಬಹುತೇಕ ಎಲ್ಲಾ ಖಾಸಗಿ ಆಸ್ಪತ್ರೆಗಳ ಹೊರ ರೋಗಿಗಳ ಚಿಕಿತ್ಸಾ ವಿಭಾಗವನ್ನು ಸ್ಥಗಿತ ಗೊಳಿಸಲಾಗಿದೆ. ಕೇವಲ ತುರ್ತು ಚಿಕಿತ್ಸಾ ವಿಭಾಗ ಹಾಗು ಒಳರೋಗಿಗಳಿಗೆ ಸೇವೆ ಒದಗಿಸಲಾಗುತ್ತಿದೆ.
ನಗರದಲ್ಲಿ ಖಾಸಗಿ ಆಸ್ಪತ್ರೆ ಹಾಗು ಕ್ಲಿನಿಕ್ ಗಳು ಬಂದ್ ಆಗಿರುವ ಹಿನ್ನೆಲೆಯಲ್ಲಿ ಜನರು ಸರಕಾರಿ ಆಸ್ಪತ್ರೆಯನ್ನೆ ಅವಲಂಭಿಸಬೇಕಾಗಿದೆ. ಜನರು ಸಾಮಾನ್ಯ ಜ್ವರ,ಕೆಮ್ಮು,ನಗಡಿ ಸೇರಿದಂತೆ ಇನ್ನಿತರ ಕಾಯಿಲೆಗಳಿಗೆ ಚಿಕಿತ್ಸೆ ಪಡೆಯಲು ನಗರದ ಸರಕಾರಿ ವೆನ್ಲಾಕ್ ಆಸ್ಪತ್ರೆಯನ್ನೇ ಅವಲಂಭಿಸಿದ್ದಾರೆ.
ವೈದ್ಯರ ಮುಷ್ಕರದ ಮಾಹಿತಿ ಇಲ್ಲದೇ ಖಾಸಗಿ ಆಸ್ಪತ್ರೆಗಳಿಗೆ ಬರುವ ರೋಗಿಗಳು ಚಿಕಿತ್ಸೆ ದೊರಕದೆ. ಹಿಂತಿರುಗುತ್ತಿರುವ ದೃಶ್ಯ ಸಾಮಾನ್ಯ ವಾಗಿದೆ. ನಗರದ ಸರಕಾರಿ ಆಸ್ಪತ್ರೆಗಳಲ್ಲಿ ಚಿಕಿತ್ಸೆಗಾಗಿ ರೋಗಿಗಳು ಹಿಚ್ಚಿನ ಸಂಖ್ಯೆಯಲ್ಲಿ ಆಗಮಿಸುತ್ತಿರುವುದು ಕಂಡುಬಂದಿದೆ.