ಸುರತ್ಕಲ್ ಟೋಲ್ ಗೇಟ್ ವಿರುದ್ದ ಅನಿರ್ಧಿಷ್ಠಾವಧಿ ಉಪವಾಸ ಸತ್ಯಾಗ್ರಹ ಎಚ್ಚರಿಕೆ

ಮಂಗಳೂರು ಸೆಪ್ಟೆಂಬರ್ 26: ಒಂದು ವಾರದೊಳಗೆ ಸುರತ್ಕಲ್ ಟೋಲ್ ಗೇಟ್ ಮುಚ್ಚದಿದ್ದರೆ ಅನಿರ್ಧಿಷ್ಠಾವಧಿ ಉಪವಾಸ ಸತ್ಯಾಗ್ರಹ ನಡೆಸಲಾಗುವುದು ಎಂದು ಸುರತ್ಕಲ್ ಟೋಲ್ ಗೇಟ್ ವಿರೋಧಿ ಹೋರಾಟ ಸಮಿತಿಯ ಸಂಚಾಲಕ ಮುನೀರ್ ಕಾಟಿಪಳ್ಳ ಎಚ್ಚರಿಕೆ ನೀಡಿದ್ದಾರೆ.

ಇಂದು ಸುರತ್ಕಲ್ ಟೋಲ್ ಗೇಟ್ ವಿರೋಧಿಸಿ ಸುರತ್ಕಲ್ ಟೋಲ್ ಗೇಟ್ ವಿರೋಧಿ ಹೋರಾಟ ಸಮಿತಿಯು ಬೃಹತ್ ಪ್ರತಿಭಟನಾ ಪಾದಯಾತ್ರೆಯನ್ನು ಹಮ್ಮಿಕೊಂಡಿತ್ತು. ಕುಳೂರಿನಿಂದ ಪ್ರಾರಂಭವಾದ ಈ ಪ್ರತಿಭಟನಾ ಪಾದಯಾತ್ರೆ ಸುರತ್ಕಲ್ ಟೋಲ್ ಗೇಟ್ ವರೆಗೆ ನಡೆದು ನಂತರ ಟೋಲ್ ಗೇಟ್ ಎದುರು ಪ್ರತಿಭಟನಾ ಸಭೆ ನಡೆಸಲಾಯಿತು.

ಈ ಸಂದರ್ಭದಲ್ಲಿ ಮಾತನಾಡಿದ ಸುರತ್ಕಲ್ ಟೋಲ್ ಗೇಟ್ ವಿರೋಧಿ ಹೋರಾಟ ಸಮಿತಿಯ ಸಂಚಾಲಕ ಮುನೀರ್ ಕಾಟಿಪಳ್ಳ ಸುರತ್ಕಲ್​​ನ ಟೋಲ್ ಗೇಟ್​ನ್ನು ಅಕ್ರಮವಾಗಿ ನಿರ್ಮಿಸಿ ಟೋಲ್ ಸಂಗ್ರಹಿಸಲಾಗುತ್ತಿದ್ದು, ಒಂದು ವಾರದೊಳಗೆ ಟೋಲ್ ಗೇಟ್ ಮುಚ್ಚಿ ಸಮಸ್ಯೆ ಇತ್ಯರ್ಥ ಪಡಿಸದಿದ್ದರೆ ಅನಿರ್ಧಿಷ್ಟಾವಧಿ ಉಪವಾಸ ಸತ್ಯಾಗ್ರಹ ನಡೆಸಲಾಗುವುದು ಎಂದು ಅವರು ಎಚ್ವರಿಸಿದ್ದಾರೆ.

ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ‌ಪ್ರತಿಭಟನಾಕಾರರು ಟೋಲ್ ಗೇಟ್ ಬಂದ್ ಮಾಡಲು ಮತ್ತು ರಸ್ತೆ ಗುಂಡಿಗಳನ್ನು ಮುಚ್ಚಲು ಆಗ್ರಹಿಸಿದ್ದಾರೆ.

ಇದೇ ಸಂದರ್ಭದಲ್ಲಿ ಟೋಲ್ ಗೇಟ್ ನಲ್ಲಿ ಸುಂಕ ಸಂಗ್ರಹಿಸುವುದನ್ನು ವಿರೋಧಿಸಿ ಕೆಲ ಕಾರ್ಯಕರ್ತರು ಟೋಲ್ ಗೇಟ್ ಗೆ ಮುತ್ತಿಗೆ ಹಾಕಲು ಯತ್ನಿಸಿದಾಗ ಆಯೋಜಕರು ಮತ್ತು ಪೊಲೀಸರು ಅದನ್ನು ತಡೆದರು.

Facebook Comments

comments