DAKSHINA KANNADA
ಮೈಕ್ರೋ ಫೈನಾನ್ಸ್ ಗಳ ವಿರುದ್ದ ಪುತ್ತೂರಿನಲ್ಲಿ ಪ್ರತಿಭಟನೆ

ಪುತ್ತೂರು ಅಕ್ಟೋಬರ್ 1: ಮೈಕ್ರೋ ಫೈನಾನ್ಸ್ ಕಂಪನಿಗಳು ಸಾಲ ಮರುಪಾವತಿ ನೆಪದಲ್ಲಿ ಮಹಿಳೆಯರಿಗೆ ದೌರ್ಜನ್ಯ ನಡೆಸುವ ಘಟನೆಗಳು ಹೆಚ್ಚಾಗುತ್ತಿದ್ದು, ಇದನ್ನು ಖಂಡಿಸಿ ಋಣ ಮುಕ್ತ ಹೋರಾಟ ಸಮಿತಿ ವತಿಯಿಂದ ಪುತ್ತೂರಿನಲ್ಲಿ ಪ್ರತಿಭಟನೆ ನಡೆಯಿತು.
ಕೊರೊನಾ ಹಿನ್ನಲೆಯಲ್ಲಿ ಜನರ ಕೆಲಸಕ್ಕೇ ತೊಂದರೆಯಾಗಿರುವ ಕಾರಣ ಸಾಲ ಪಡೆದ ಹಣವನ್ನು ಮರುಪಾವತಿ ಮಾಡಲಾಗದೆ ಸಂಕಷ್ಟಕ್ಕೀಡಾಗಿದ್ದಾರೆ. ಈ ಸಂದರ್ಭದಲ್ಲೂ ಮೈಕ್ರೋ ಫೈನಾನ್ಸ್ ಕಂಪನಿಗಳ ಸಿಬ್ಬಂದಿಗಳು ಸಾಲ ಮರುಪಾವತಿಗೆ ಒತ್ತಡ ಹೇರುತ್ತಿದ್ದಾರೆ. ಸರಕಾರ ಕೂಡಲೇ ಈ ಬಗ್ಗೆ ಸೂಕ್ತ ಕ್ರಮ ಕೈಗೊಳ್ಳಬೇಕು ಹಾಗೂ ಬಡ ಕುಟುಂಬದ ಮಹಿಳೆಯರು ಪಡೆದ ಈ ಸಾಲವನ್ನು ಮೋರಿಟೋರಿಯಂ ಸಾಲವನ್ನಾಗಿ ಪರಿವರ್ತಿಸಬೇಕು ಎಂದು ಪ್ರತಿಭಟನಾಕಾರರು ಒತ್ತಾಯಿಸಿದರು.
