DAKSHINA KANNADA
ದಲಿತ ಯುವತಿಗೆ ನ್ಯಾಯ ಕೇಳುವ ಮುಖಂಡನ ಮಗನಿಂದಲೇ ದಲಿತ ಯುವತಿಗೆ ಲೈಂಗಿಕ ಕಿರುಕುಳ….

ಪುತ್ತೂರು : ಉತ್ತರ ಪ್ರದೇಶದ ಹಾಥರಸ್ನಲ್ಲಿ ನಡೆದಿದೆ ಎನ್ನಲಾದ ಗ್ಯಾಂಗ್ರೇಪ್ ಘಟನೆಯನ್ನು ಖಂಡಿಸಿ ಎಸ್ಡಿಪಿಐ ಸಂಘಟನೆಯ ಮುಖಂಡನೊಬ್ಬ ಪ್ರತಿಭಟನೆ ನಡೆಸುತ್ತಿದ್ದರೆ, ಇತ್ತ ಆತನ ಮಗ ದಲಿತ ಯುವತಿಗೆ ಕಿರುಕುಳ ನೀಡಿದ ಪ್ರಕರಣದಲ್ಲಿ ಬಂಧನವಾಗಿರುವ ಘಟನೆ ದಕ್ಷಿಣಕನ್ನಡ ಜಿಲ್ಲೆಯ ಪುತ್ತೂರಿನಲ್ಲಿ ನಡೆದಿದೆ.
ಮೊಹಮ್ಮದ್ ಪೈಝಲ್ ಬಂಧಿತ ಆರೋಪಿಯಾಗಿದ್ದು. ಈತ ಪುತ್ತೂರಿನ ಚಿಕ್ಕಮುಡ್ನೂರು ಗ್ರಾಮದ ನಿವಾಸಿ. ಪೈಝಲ್ಗೆ ಆಂಧ್ರ ಮೂಲದ ಯುವತಿಯೊಬ್ಬಳು ಇನ್ಸ್ಟಾಗ್ರಾಂ ಮೂಲಕ ಪರಿಚಯವಾಗಿದ್ದಳು. ಇಬ್ಬರ ನಡುವಿನ ಪರಿಚಯ ಪ್ರೀತಿಗೆ ತಿರುಗಿ ದೈಹಿಕ ಸಂಬಂಧಕ್ಕೂ ಕಾರಣವಾಗಿತ್ತು ಎನ್ನಲಾಗಿದೆ. ಅಲ್ಲದೆ, ಯುವತಿಯ ಭಾವಚಿತ್ರಗಳನ್ನು ಜಾಲತಾಣದಲ್ಲಿ ಹರಿಬಿಡುವುದಾಗಿ ಬೆದರಿಸಿ, ಕಿರುಕುಳ ನೀಡಿರುವು ಆರೋಪವೂ ಕೇಳಿಬಂದಿದೆ.

ಈ ಸಂಬಂಧ ಯುವತಿ ಆಂಧ್ರ ಪೊಲೀಸರಿಗೆ ದೂರು ನೀಡಿದ್ದಳು. ಹೀಗಾಗಿ ನಿನ್ನೆ ಪುತ್ತೂರಿಗೆ ಬಂದ ಪೊಲೀಸರು ಆರೋಪಿಯನ್ನು ಬಂಧಿಸಿ ಕರೆದೊಯ್ದಿದ್ದಾರೆ. ಇನ್ನೊಂದೆಡೆ ಪೈಝಲ್ ತಂದೆ ಅಬ್ದುಲ್ ಹಮೀದ್ ಸಾಲ್ಮರ ಎಸ್ಡಿಪಿಐ ಸಂಘಟನೆಯ ಮುಖಂಡನಾಗಿದ್ದು, ಹಾಥರಸ್ನಲ್ಲಿ ನಡೆದಿದೆ ಎನ್ನಲಾದ ಗ್ಯಾಂಗ್ರೇಪ್ ಘಟನೆಯನ್ನು ಖಂಡಿಸಿ ನಿನ್ನೆ ಪ್ರತಿಭಟನೆ ನಡೆಸುತ್ತಿದ್ದರು. ಇದರ ನಡುವೆ ಮಗನನ್ನು ಲೈಂಗಿಕ ಕಿರುಕುಳ ಪ್ರಕರಣದಲ್ಲಿ ಬಂಧಿಸಿರುವುದು ಪೇಚಿಗೆ ಮುಜುಗರಕ್ಕೀಡುಮಾಡಿದೆ.