Connect with us

    BANTWAL

    ರಾಜ್ಯ ಕಾಂಗ್ರೆಸ್ ಸರ್ಕಾರದ ರೈತ ವಿರೋಧಿ ಮತ್ತು ಭ್ರಷ್ಟಾಚಾರ ನೀತಿಯ ವಿರುದ್ಧ ಬಂಟ್ವಾಳದಲ್ಲಿ ಪ್ರತಿಭಟನೆ

    ಬಂಟ್ವಾಳ ಬಿಜೆಪಿ ಮಂಡಲದ ಬಿಜೆಪಿ ರೈತ ಮೋರ್ಚಾ ವತಿಯಿಂದ ರಾಜ್ಯ ಕಾಂಗ್ರೆಸ್ ಸರ್ಕಾರದ ರೈತ ವಿರೋಧಿ ಮತ್ತು ಭ್ರಷ್ಟಾಚಾರ ನೀತಿಯ ವಿರುದ್ಧ ಪ್ರತಿಭಟನೆ ಬಿಸಿರೋಡಿನ ಪ್ಲೈ ಓವರ್ ನ ಅಡಿಭಾಗದಲ್ಲಿ ನಡೆಯಿತು.

    ಬಂಟ್ವಾಳ: ಬಂಟ್ವಾಳ ಬಿಜೆಪಿ ಮಂಡಲದ ಬಿಜೆಪಿ ರೈತ ಮೋರ್ಚಾ ವತಿಯಿಂದ ರೈತ ವಿರೋಧಿ ಮತ್ತು ಭ್ರಷ್ಟಾಚಾರ ನೀತಿಯ ಬಗ್ಗೆ ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ಧ ಪ್ರತಿಭಟನೆ ಬಿಸಿರೋಡಿನ ಪ್ಲೈ ಓವರ್ ನ ಅಡಿಭಾಗದಲ್ಲಿ ನಡೆಯಿತು.

    ಬೂಡ ಮಾಜಿ ಅಧ್ಯಕ್ಷ ದೇವದಾಸ್ ಶೆಟ್ಟಿ ಮಾತನಾಡಿ, ರಾಜ್ಯದ ಸಿದ್ದರಾಮಯ್ಯ ನೇತ್ರತ್ವದ ಕಾಂಗ್ರೆಸ್ ಸರಕಾರ ರೈತ ವಿರೋಧಿಯಾದ ಆಡಳಿತ ನಡೆಸುತ್ತಿದೆ ಎಂದು ಆರೋಪಿಸಿದ ಅವರು ಮಾಜಿ ಮುಖ್ಯ ಮಂತ್ರಿ ಯಡಿಯೂರಪ್ಪ ಅವರು ರೈತರಿಗೆ ಕೇಂದ್ರದ ಕಿಸಾನ್ ಸಮ್ಮಾನ್ ಯೋಜನೆಯ ಮೂಲಕ ರಾಜ್ಯದಿಂದ 4 ಸಾವಿರ ರೂಗಳನ್ನು ನೀಡುವ ಮೂಲಕ ರೈತರಿಗೆ ಪ್ರೋತ್ಸಾಹ ನೀಡಿದರೆ ಸಿದ್ದರಾಮಯ್ಯ ನೇತ್ರತ್ವದ ಸರಕಾರ ಅದನ್ನು ನಿಲ್ಲಿಸಿದೆ.

    ಇದರ ಜೊತೆಗೆ ಬಸವರಾಜ ಬೊಮ್ಮಾಯಿ ಅವರ ಆಡಳಿತ ಅವಧಿಯಲ್ಲಿ ಜಾರಿ‌ಮಾಡಲಾಗಿದ್ದ ವಿದ್ಯಾನಿಧಿ ಯೋಜನೆಯನ್ನು ನಿಲ್ಲಿಸುವ ಮೂಲಕ ಈ ರಾಜ್ಯದಲ್ಲಿ ರೈತರಿಗೆ ಅನ್ಯಾಯ ಮಾಡಿದ್ದಾರೆ ಎಂದು ಆರೋಪ ಮಾಡಿದರು.

    ರೈತರ ಕಲ್ಯಾಣಕ್ಕಾಗಿ ಬಿಜೆಪಿ ಅವಧಿಯಲ್ಲಿ ಅನೇಕ ರೈತಪರವಾದ ಯೋಜನೆಗಳನ್ನು ಕಾರ್ಯರೂಪಕ್ಕೆ ತಂದರೆ, ಕಾಂಗ್ರೆಸ್ ಸರಕಾರ ಎಲ್ಲವನ್ನು ನಿಲ್ಲಿಸಿ ದ್ವೇಷದ ರಾಜಕಾರಣ ಮಾಡುತ್ತಿದೆ ಎಂದು ದೂರಿದರು.
    ಪ್ರತಿಭಟನಾ ಸಭೆಯಲ್ಲಿ
    ಮಾಜಿ ಶಾಸಕ ಪದ್ಮನಾಭ ಕೊಟ್ಟಾರಿ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಕಸ್ತೂರಿ ಪಂಜ,  ಬಂಟ್ವಾಳ ಮಂಡಲದ ಬಿಜೆಪಿ ಅಧ್ಯಕ್ಷ ದೇವಪ್ಪ ಪೂಜಾರಿ, ಪ್ರಮುಖರಾದ ಸುಲೋಚನ ಜಿ.ಕೆ.ಭಟ್, ರಾಮ್ ದಾಸ ಬಂಟ್ವಾಳ, ಡೊಂಬಯ್ಯ ಅರಳ,ಹರಿಕೃಷ್ಣ ಬಂಟ್ವಾಳ, ಪ್ರಭಾಕರ್ ಪ್ರಭು, ಚೆನ್ನಪ್ಪ ಆರ್.ಕೋಟ್ಯಾನ್, ದಿನೇಶ್ ಅಮ್ಟೂರು, ಗಣೇಶ್ ರೈ, ಪುರುಷೋತ್ತಮ ಶೆಟ್ಟಿ, ಕಮಲಾಕ್ಷಿ ಕೆ.ಪೂಜಾರಿ,ಆನಂದ ಕೆ.ಶಂಭೂರು, ಮೋನಪ್ಪ ದೇವಶ್ಯ, ಗೋವಿಂದ ಪ್ರಭು, ಸಂತೋಷ್ ರಾಯಿಬೆಟ್ಟು,ವಸಂತ ,ಸದಾಶಿವ ಜಿ. ಸುಧಾಕರ ಶೆಟ್ಟಿ, ಚಿದಾನಂದ ರೈ , ಶರ್ಮಿತ್ ಜೈನ್, ಕಾರ್ತಿಕ್ ಬಲ್ಲಾಳ್, ಅಜಿತ್ ಶೆಟ್ಟಿ, ಪ್ರೇಮನಾಥ ಶೆಟ್ಟಿ , ದಿನೇಶ್ ದಂವೆದಾರ್, ಉಮೇಶ್ ಅರಳ, ವಸಂತ ಅಣ್ಣಳಿಕೆ, ರಾಧಕೃಷ್ಣ ತಂತ್ರಿ,ವಾಮನ ಆಚಾರ್ಯ, ಸುಮಿತ್ರಾ, ಭಾರತಿ ಚೌಟ, ಪಿ.ಎಸ್.ಮೋಹನ್, ತನಿಯಪ್ಪ ಗೌಡ, ಸುರೇಶ್ ಮೈರ, ಲಖಿತ ಆರ್ ಶೆಟ್ಟಿ, ರಾಜೇಶ್ ಬಾಳೆಕಲ್ಲು,,ವಿಶ್ವನಾಥ ಪೂಜಾರಿ ಕಟ್ಟತ್ತಿಲ,ಶಿವಪ್ಪ ಗೌಡ, ಮತ್ತಿತರರು ಉಪಸ್ಥಿತರಿದ್ದರು.

    Share Information
    Advertisement
    Click to comment

    You must be logged in to post a comment Login

    Leave a Reply