KARNATAKA
ಮಂಗಳೂರು: ನಿಷೇಧಾಜ್ಞೆ ಉಲ್ಲಂಘಿಸಿ ಪ್ರತಿಭಟನೆ ಪೊಲೀಸರಿಂದ ಲಘು ಲಾಠಿ ಪ್ರಹಾರ
ಮಂಗಳೂರು: ನಿಷೇಧಾಜ್ಞೆ ಉಲ್ಲಂಘಿಸಿ ಪ್ರತಿಭಟನೆ ಪೊಲೀಸರಿಂದ ಲಘು ಲಾಠಿ ಪ್ರಹಾರ
ಮಂಗಳೂರು ಡಿಸೆಂಬರ್ 19:ಜಿಲ್ಲೆಯಾದ್ಯಂತ ಸೆಕ್ಷನ್ 144 ರ ಅನ್ವಯ ನಿಷೇಧಾಜ್ಞೆ ಇದ್ದರೂ ಕೂಡ ನಿಷೇಧಾಜ್ಞೆಯನ್ನು ಉಲ್ಲಂಘಿಸಿ ಪ್ರತಿಭಟನೆ ನಡೆಸಲು ಆಗಮಿಸಿದ ಗುಂಪೊಂದರ ಮೇಲೆ ಪೊಲೀಸರು ಲಾಠಿ ಜಾರ್ಜ್ ನಡೆಸಿ ಹಲವರನ್ನು ವಶಕ್ಕೆ ಪಡೆದಿರುವ ಘಟನೆ ಮಂಗಳೂರಿನ ಸ್ಟೇಟ್ ಬ್ಯಾಂಕ್ ಬಳಿ ನಡೆದಿದೆ.
ಸಂಘಟನೆಯೊಂದು ಇಂದು ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಲು ನಿರ್ಧರಿಸಿತ್ತು, ಆದರೆ ಸೆಕ್ಷನ್ 144 ಜಾರಿ ಹಿನ್ನಲೆ ಪ್ರತಿಭಟನೆಯನ್ನು ಮುಂದೂಡಲಾಗಿತ್ತು. ಆದರೂ ಸಾಮಾಜಿಕ ಜಾಲತಾಣಗಳಲ್ಲಿ ಹರಡಿದ ಸಂದೇಶದ ಆದಾರದ ಮೇಲೆ ಕೆಲವರು ಜಿಲ್ಲಾಧಿಕಾರಿ ಕಚೇರಿ ಎದುರು ಜಮಾಯಿಸಿದ್ದರು. ಈ ನಡುವೆ ಗುಂಪಿನಲ್ಲಿದ್ದ ಕೆಲವು ಯುವಕರು ಪೌರತ್ವ ತಿದ್ದುಪಡಿ ಮಸೂದೆ ವಿರೋಧಿಸಿ ಘೋಷಣೆ ಕೂಗಲಾರಂಭಿಸಿದ್ದಾರೆ. ಈ ಹಿನ್ನಲೆಯಲ್ಲಿ ಪೊಲೀಸರು ಗುಂಪನ್ನು ಚದುರಿಸಲು ಲಘು ಲಾಠಿ ಪ್ರಹಾರ ನಡೆಸಿದ್ದಾರೆ. ನಿಷೇಧಾಜ್ಞೆ ಉಲ್ಲಂಘಿಸಿದ ಹಿನ್ನಲೆ ಕೆಲವರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.