ಬಾಲಕಿ ಮೇಲೆ ಪೊಲೀಸ್ ದೌರ್ಜನ್ಯ ಪ್ರಕರಣ ಪೊಲೀಸರ ವಜಾಕ್ಕೆ ಠಾಣೆ ಎದುರು ಪ್ರತಿಭಟನೆ

ಪುತ್ತೂರು ಜುಲೈ 2: ಪುತ್ತೂರು ಗ್ರಾಮಾಂತರ ಸಂಪ್ಯ ಪೋಲೀಸ್ ಠಾಣೆಯಲ್ಲಿ ನಡೆದ ಬಾಲಕಿ‌ ಮೇಲಿನ‌ ಪೋಲೀಸ್ ದೌರ್ಜನ್ಯ ಖಂಡಿಸಿ ವಿವಿಧ ಸಂಘಟನೆಗಳು ಸಂಪ್ಯ ಪೋಲೀಸ್ ಠಾಣೆಯ ಮುಂದೆ ಪ್ರತಿಭಟನೆ ನಡೆಸಿದವು.

ಜೂನ್ 29 ರ ಚಿನ್ನದ ಸರ ಕದ್ದ ಆರೋಪದಡಿ ಸಂಪ್ಯ ಠಾಣೆಯ ಪೋಲೀಸರು ಬಾಲಕಿ‌ ಮೇಲೆ ದೌರ್ಜನ್ಯ ನಡೆಸಿದ್ದಾರೆ ಎಂದು ಬಾಲಕಿ ಆರೋಪಿಸಿದ್ದಳು. ಈ ಘಟನೆಗೆ ಸಂಬಂಧಿಸಿದಂತೆ ಜಿಲ್ಲಾ ಪೋಲೀಸ್ ವರಿಷ್ಠಾಧಿಕಾರಿ ಸಂಪ್ಯ ಠಾಣೆಯ ಒರ್ವ ಪುರುಷ ಹಾಗೂ ಇಬ್ಬರು ಮಹಿಳಾ ಪೇದೆಗಳನ್ನು ಅಮಾನತು ಮಾಡಿದ್ದರು.

ಆದರೆ ಈ ಪೋಲೀಸರನ್ನು ಸೇವೆಯಿಂದಲೇ ವಜಾಗೊಳಿಸಬೇಕೆಂದು ಪ್ರತಿಭಟನಾಕಾರರು ಒತ್ತಾಯಿಸಿದರು. ಪ್ರತಿಭಟನಾ ಸ್ಥಳಕ್ಕೆ ಪುತ್ತೂರು ತಹಶೀಲ್ದಾರ್ ಭೇಟಿ ನೀಡಿ ಸೂಕ್ತ ಕ್ರಮ ಕೈಗೊಳ್ಳುವ ಭರವಸೆಯ ನೀಡಿದ ಬಳಿಕ ಪ್ರತಿಭಟನಾಕಾರರು ತಮ್ಮ ಪ್ರತಿಭಟನೆಯನ್ನು ಹಿಂಪಡೆದರು.

Facebook Comments

comments