ಸಾಸ್ತಾನ ಟೋಲ್ ಗೇಟ್ ನಲ್ಲಿ ಸಿಬ್ಬಂದಿ ಪ್ರತಿಭಟನೆ ವಾಹನಗಳಿಗೆ ಉಚಿತ ಪ್ರವೇಶ

ಉಡುಪಿ ಸೆಪ್ಟೆಂಬರ್ 12: ಉಡುಪಿಯ ಸಾಸ್ತಾನ ಟೋಲ್ ಗೇಟ್ ನಲ್ಲಿ ಕೆಲಸ ಮಾಡುವ ಸಿಬ್ಬಂದಿಗಳಿಗೆ ಸರಿಯಾಗಿ ವೇತನ ನೀಡದೆ ವಿಳಂಬ ಮಾಡುತ್ತಿದ್ದಾರೆ ಎಂದು ಆರೋಪಿಸಿ ಸಿಬ್ಬಂದಿಗಳು ಮುಷ್ಕರ ನಡೆಸುತ್ತಿದ್ದಾರೆ.

ಇಂದು ಬೆಳಿಗ್ಗೆಯಿಂದ ಟೋಲ್ ಗೇಟ್ ಸಿಬ್ಬಂದಿಗಳು ಪ್ರತಿಭಟನೆ ನಡೆಸುತ್ತಿರುವ ಹಿನ್ನಲೆಯಲ್ಲಿ ಟೋಲ್ ಸಂಗ್ರಹವನ್ನು ನಿಲ್ಲಿಸಿದ್ದಾರೆ. ಇದರಿಂದಾಗಿ ಎಲ್ಲಾ ವಾಹನಗಳು ಉಚಿತವಾಗಿ ಸಂಚರಿಸುತ್ತಿವೆ.

ಸಾಸ್ತಾನ ಟೋಲ್ ಗೇಟ್ ನಲ್ಲಿ ವೇತನ ನೀಡುವಲ್ಲಿ ವಿಳಂಬ ಮಾಡುತ್ತಿದ್ದು, ಅಲ್ಲದೆ ಪಿ.ಎಫ್. ಕುರಿತು ಸ್ಪಷ್ಟತೆ ಇಲ್ಲದಿರುವುದನ್ನು ವಿರೋಧಿಸಿ‌ ಈ ಪ್ರತಿಭಟನೆ ನಡೆಯುತ್ತಿದೆ. ಕಳೆದ ತಿಂಗಳು ಕೂಡ ಇದೇ ರೀತಿಯ ಪ್ರತಿಭಟನೆ ನಡೆಸಲಾಗಿತ್ತು.

Facebook Comments

comments