LATEST NEWS
ಸಾಮಾಜಿಕ ಜಾಲತಾಣದಲ್ಲಿ ಟ್ರೆಂಡ್ ಆಗುತ್ತಿರುವ #KumaraswamynotmyCm

ಸಾಮಾಜಿಕ ಜಾಲತಾಣದಲ್ಲಿ ಟ್ರೆಂಡ್ ಆಗುತ್ತಿರುವ #KumaraswamynotmyCm
ಮಂಗಳೂರು ಜುಲೈ 14: ಮೊನ್ನೆ ಸಮ್ಮಿಶ್ರ ಸರಕಾರ ಮಂಡಿಸಿದ ರಾಜ್ಯ ಬಜೆಟ್ ನಲ್ಲಿ ಕರಾವಳಿಯನ್ನು ಕಡೆಗಣಿಸಿದ್ದಕ್ಕೆ ಕರಾವಳಿಯಲ್ಲಿ ಭಾರಿ ಆಕ್ರೋಶ ವ್ಯಕ್ತವಾಗಿದೆ. ಸಿಎಂ ಕುಮಾರಸ್ವಾಮಿ ಅವರು ಕರಾವಳಿ ಜಿಲ್ಲೆಗಳಿಗೆ ಯಾವುದೇ ಅನುದಾನ ನೀಡದೇ ಕರಾವಳಿಯನ್ನು ಸಂಪೂರ್ಣ ನಿರ್ಲಕ್ಷಿಸಿದ್ದಾರೆ ಎಂಬ ಆಕ್ರೋಶ ವ್ಯಕ್ತವಾಗಿದೆ.
ಈ ನಡುವೆ ಕುಮಾರಸ್ವಾಮಿ ನಾಟ್ ಮೈ ಸಿಎಂ ಎಂದು ಸಿಎಂ ಎಚ್.ಡಿ ಕುಮಾರಸ್ವಾಮಿ ವಿರುದ್ಧ ಕರಾವಳಿಯ ಜನ ಸಾಮಾಜಿಕ ಜಾಲತಾಣದಲ್ಲಿ ಹೋರಾಟ ಮಾಡುತ್ತಿದ್ದಾರೆ.

ಕುಮಾರಸ್ವಾಮಿ ನಾಟ್ ಮೈ ಸಿಎಂ ಎಂಬ ಫೇಸ್‍ಬುಕ್ ಪೇಜ್ ನಲ್ಲಿ ಸಿಎಂ ವಿರುದ್ಧ ಕರಾವಳಿಯ ಜನ ಅಭಿಯಾನ ಆರಂಭಿಸಿದ್ದು, ಅನುದಾನ ನೀಡದ ಕುಮಾರಸ್ವಾಮಿ ನಮ್ಮ ಮುಖ್ಯಮಂತ್ರಿಯಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಮೀನುಗಾರರಿಗೆ ದ್ರೋಹ ಮಾಡಿದ ಕುಮಾರಸ್ವಾಮಿ ಗೆ ಧಿಕ್ಕಾರ, ಕರಾವಳಿ ವಿರೋಧಿ ಸರ್ಕಾರಕ್ಕೆ ಧಿಕ್ಕಾರ, ಕಡಲ ಮಕ್ಕಳ ಒಡಲು ಬಗೆದ ದುಷ್ಟ ಸರ್ಕಾರ ಎಂಬಿತ್ಯಾದಿ ಪ್ಲೇ ಕಾರ್ಡ್‍ಗಳನ್ನು ಹಾಕಿ ವಿರೋಧ ವ್ಯಕ್ತಪಡಿಸಿದ್ದಾರೆ. ಈಗಾಗಲೇ ಅವಿಭಜಿತ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸಿಎಂ ಕುಮಾರಸ್ವಾಮಿ ನಡೆಯ ವಿರುದ್ಧ ಪ್ರತಿಭಟನೆ ನಡೆದಿದ್ದು, ಈಗ ಫೇಸ್ ಬುಕ್ ಮುಖಾಂತರವಾಗಿ ಹೋರಾಟ ತೀವ್ರಗೊಳಿಸಲು ನಿರ್ಧರಿಸಿದ್ದಾರೆ.