Connect with us

DAKSHINA KANNADA

ಗೌರಿ ಲಂಕೇಶ್ ಹತ್ಯೆ ಖಂಡಿಸಿ ಸಮಾನ ಮನಸ್ಕರ ಪ್ರತಿಭಟನೆ.

ಮಂಗಳೂರು, ಸೆಪ್ಟಂಬರ್ 6: ಹಿರಿಯ ಪತ್ರಕರ್ತೆ ಗೌರಿ ಲಂಗೇಶ್ ಹತ್ಯೆಯನ್ನು ಖಂಡಿಸಿ ಸಮಾನ ಮನಸ್ಕ ಸಂಘಟನೆಗಳು ಮಂಗಳೂರಿನ ಜಿಲ್ಲಾಧಿಕಾರಿ ಕಛೇರಿ ಮುಂಭಾಗದಲ್ಲಿ ಪ್ರತಿಭಟನೆಯನ್ನು ನಡೆಸಿತು. ಪ್ರತಿಭಟನೆಯನ್ನು ಉದ್ಧೇಶಿಸಿ ಮಾತನಾಡಿದ ಡಿವೈಎಫ್ಐ ರಾಜ್ಯಾಧ್ಯಕ್ಷ ಮುನೀರ್ ಕಾಟಿಪಳ್ಳ , ಹಲವು ಜನಪರ ಹೋರಾಟಗಳಲ್ಲಿ ತೊಡಗಿಕೊಂಡಿದ್ದ ಗೌರಿ ಲಂಕೇಶ್ ಹತ್ಯೆ ಖಂಡನೀಯ ಎಂದರು. ಸರಕಾರ ಹಾಗೂ ಪೋಲೀಸ್ ಇಲಾಖೆ ಕೂಡಲೇ ಹಂತಕರನ್ನು ಬಂಧಿಸಿ ಕಾನೂನಿನ ಮುಂದೆ ನಿಲ್ಲಿಸಬೇಕೆಂದು ಅವರು ಇದೇ ಸಂದರ್ಭದಲ್ಲಿ ಒತ್ತಾಯಿಸಿದರು. ಸಾಹಿತಿಗಳಾದ ವಾಮನ ನಂದಾವರ, ಚಂದ್ರಕಲಾ ನಂದಾವರ ಸೇರಿದಂತೆ ಹಲವು ಸಂಘಟನೆಗಳ ಪದಾಧಿಕಾರಿಗಳು ಈ ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.

Facebook Comments

comments