KARNATAKA
ಹುಬ್ಬಳ್ಳಿ: ಸಂಪಿಗೆ ರೋಡ್ ಮತ್ತು ತಿಪಟೂರು ನಿಲ್ದಾಣದಲ್ಲಿ ಎಕ್ಸ್ ಪ್ರೆಸ್ ರೈಲುಗಳ ಹೆಚ್ಚುವರಿ ನಿಲುಗಡೆಗೆ ಅವಕಾಶ
ಹುಬ್ಬಳ್ಳಿ : ಯಶವಂತಪುರ ಮತ್ತು ಚಿಕ್ಕಮಗಳೂರು ನಡುವೆ ಸಂಚರಿಸುವ ಎಕ್ಸ್ಪ್ರೆಸ್ ರೈಲು ಸಂಖ್ಯೆ 16240/16239 ಅನ್ನು ಸಂಪಿಗೆ ರೋಡ್ ನಿಲ್ದಾಣದಲ್ಲಿ ಮತ್ತು ಕೆಎಸ್ಆರ್ ಬೆಂಗಳೂರು ಮತ್ತು ಎಸ್ಎಸ್ಎಸ್ ಹುಬ್ಬಳ್ಳಿ ನಡುವೆ ಚಲಿಸುವ ರೈಲು ಸಂಖ್ಯೆ 12079/12080 ಮತ್ತು ಕೆಎಸ್ಆರ್ ಬೆಂಗಳೂರು ಮತ್ತು ಶಿವಮೊಗ್ಗ ಟೌನ್ ನಡುವೆ ಚಲಿಸುವ ರೈಲು ಸಂಖ್ಯೆ 12089/12090 ಜನಶತಾಬ್ದಿ ಎಕ್ಸ್ಪ್ರೆಸ್ ರೈಲುಗಳನ್ನು ತಿಪಟೂರು ನಿಲ್ದಾಣದಲ್ಲಿ ಪ್ರಾಯೋಗಿಕ ನಿಲುಗಡೆಗೆ ಅವಕಾಶ ಕಲ್ಪಿಸಲು ರೈಲ್ವೆ ಮಂಡಳಿ ಅಧಿಸೂಚನೆ ಹೊರಡಿಸಿದೆ.
ಅದರಂತೆ, ಪ್ರಾಯೋಗಿಕ ನಿಲುಗಡೆಯ ಸಮಯಗಳು ಈ ಕೆಳಗಿನಂತಿವೆ:
1. ನವೆಂಬರ್ 15, 2024 ರಿಂದ ಫೆಬ್ರವರಿ 15, 2025 ರವರೆಗೆ ಜಾರಿಗೆ ಬರುವಂತೆ ರೈಲು ಸಂಖ್ಯೆ 16240 ಯಶವಂತಪುರ-ಚಿಕ್ಕಮಗಳೂರು ಎಕ್ಸ್ಪ್ರೆಸ್ ಸಂಜೆ 05:04 ಕ್ಕೆ ಸಂಪಿಗೆ ರೋಡ್ ನಿಲ್ದಾಣವನ್ನು ತಲುಪಿ ಸಂಜೆ 05:05 ಕ್ಕೆ ಹೊರಡಲಿದೆ.
2. ನವೆಂಬರ್ 16, 2024 ರಿಂದ ಫೆಬ್ರವರಿ 15, 2025 ರವರೆಗೆ ಜಾರಿಗೆ ಬರುವಂತೆ ರೈಲು ಸಂಖ್ಯೆ 16239 ಚಿಕ್ಕಮಗಳೂರು-ಯಶವಂತಪುರ ಎಕ್ಸ್ಪ್ರೆಸ್ ಬೆಳಿಗ್ಗೆ 11:13 ಕ್ಕೆ ಸಂಪಿಗೆ ರೋಡ್ ನಿಲ್ದಾಣವನ್ನು ತಲುಪಿ ಬೆಳಿಗ್ಗೆ 11:14 ಕ್ಕೆ ಹೊರಡಲಿದೆ.
3. ನವೆಂಬರ್ 16, 2024 ರಿಂದ ಮೇ 15, 2025 ರವರೆಗೆ ಜಾರಿಗೆ ಬರುವಂತೆ ರೈಲು ಸಂಖ್ಯೆ 12079 ಕೆಎಸ್ಆರ್ ಬೆಂಗಳೂರು-ಎಸ್ಎಸ್ಎಸ್ ಹುಬ್ಬಳ್ಳಿ ಜನಶತಾಬ್ದಿ ಎಕ್ಸ್ಪ್ರೆಸ್ ಬೆಳಿಗ್ಗೆ 07:49 ಕ್ಕೆ ತಿಪಟೂರು ನಿಲ್ದಾಣವನ್ನು ತಲುಪಿ ಬೆಳಿಗ್ಗೆ 07:50 ಕ್ಕೆ ಹೊರಡಲಿದೆ.
4. ನವೆಂಬರ್ 15, 2024 ರಿಂದ ಮೇ 15, 2025 ರವರೆಗೆ ಜಾರಿಗೆ ಬರುವಂತೆ ರೈಲು ಸಂಖ್ಯೆ 12080 ಎಸ್ಎಸ್ಎಸ್ ಹುಬ್ಬಳ್ಳಿ – ಕೆಎಸ್ಆರ್ ಬೆಂಗಳೂರು ಜನಶತಾಬ್ದಿ ಎಕ್ಸ್ಪ್ರೆಸ್ ಸಂಜೆ 06:34 ಕ್ಕೆ ತಿಪಟೂರು ನಿಲ್ದಾಣಕ್ಕೆ ಬಂದು ಸಂಜೆ 06:35 ಕ್ಕೆ ಹೊರಡಲಿದೆ.
5. ನವೆಂಬರ್ 15, 2024 ರಿಂದ ಮೇ 15, 2025 ರವರೆಗೆ ಜಾರಿಗೆ ಬರುವಂತೆ ರೈಲು ಸಂಖ್ಯೆ 12089 ಕೆಎಸ್ಆರ್ ಬೆಂಗಳೂರು-ಶಿವಮೊಗ್ಗ ಟೌನ್ ಜನಶತಾಬ್ದಿ ಎಕ್ಸ್ಪ್ರೆಸ್ ರಾತ್ರಿ 07:09 ಕ್ಕೆ ತಿಪಟೂರು ನಿಲ್ದಾಣವನ್ನು ತಲುಪಿ ಸಂಜೆ 07:10 ಕ್ಕೆ ಹೊರಡಲಿದೆ.
6. ನವೆಂಬರ್ 16, 2024 ರಿಂದ ಮೇ 15, 2025 ರವರೆಗೆ ಜಾರಿಗೆ ಬರುವಂತೆ ರೈಲು ಸಂಖ್ಯೆ 12090 ಶಿವಮೊಗ್ಗ ಟೌನ್ – ಕೆಎಸ್ಆರ್ ಬೆಂಗಳೂರು ಜನಶತಾಬ್ದಿ ಎಕ್ಸ್ಪ್ರೆಸ್ ಬೆಳಿಗ್ಗೆ 07:14 ಕ್ಕೆ ತಿಪಟೂರು ನಿಲ್ದಾಣಕ್ಕೆ ಬಂದು ಬೆಳಿಗ್ಗೆ 07:15 ಕ್ಕೆ ಹೊರಡಲಿದೆ.
ಈ ಹೆಚ್ಚುವರಿ ನಿಲುಗಡೆಯು ಸಂಪಿಗೆ ರೋಡ್ ಮತ್ತು ತಿಪಟೂರಿನಿಂದ ಪ್ರಯಾಣಿಸುವ ಪ್ರಯಾಣಿಕರಿಗೆ ಹೆಚ್ಚಿನ ಅನುಕೂಲ ಮತ್ತು ಪ್ರವೇಶವನ್ನು ಒದಗಿಸುತ್ತದೆ ಮತ್ತು ಈ ಪ್ರದೇಶದ ಆರ್ಥಿಕ ಬೆಳವಣಿಗೆ ಮತ್ತು ಅಭಿವೃದ್ಧಿಗೆ ಉತ್ತೇಜನ ನೀಡುತ್ತದೆ ಎಂದು ನಿರೀಕ್ಷಿಸಲಾಗಿದೆ.