Connect with us

LATEST NEWS

ಉಡುಪಿ -ಮಹಿಳಾ ಹಾಸ್ಟೆಲ್ ನ ಶೌಚಾಲಯದಲ್ಲಿ ಪ್ರಚೋದನಕಾರಿ ಬರಹ, ಪ್ರಕರಣ ದಾಖಲು

ಉಡುಪಿ ಮೇ 10: ಎಂಜಿನಿಯರಿಂಗ್ ಕಾಲೇಜಿನ ಕ್ಯಾಂಪಸ್‌ನಲ್ಲಿರುವ ಮಹಿಳಾ ಹಾಸ್ಟೆಲ್‌ನ ಶೌಚಾಲಯದ ಗೋಡೆ ಮೇಲೆ ಧಾರ್ಮಿಕ ಸಮುದಾಯಗಳನ್ನು ಗುರಿಯಾಗಿಸಿಕೊಂಡು ಪ್ರಚೋದನಕಾರಿ ಮತ್ತು ಅಶ್ಲೀಲ ಬರಹಗಳು ಕಂಡುಬಂದಿದ್ದು, ಪ್ರಕರಣ ದಾಖಲಾಗಿದೆ ಎಂದು ಪೊಲೀಸರು ಶನಿವಾರ ತಿಳಿಸಿದ್ದಾರೆ.


ಕಾರ್ಕಳ ತಾಲ್ಲೂಕಿನ ನಿಟ್ಟೆಯಲ್ಲಿರುವ ಮಹಿಳಾ ಹಾಸ್ಟೆಲ್‌ನ ಮುಖ್ಯ ಬ್ಲಾಕ್‌ನ ಸ್ನಾನಗೃಹದ ಗೋಡೆಯ ಮೇಲೆ ಇಂಗ್ಲಿಷ್‌ನಲ್ಲಿ ಬರೆಯಲಾದ ಪ್ರಚೋದನಕಾರಿ ಘೋಷಣೆಗಳು ಮೇ 7ರ ಸಂಜೆ ಪತ್ತೆಯಾಗಿವೆ. ಪೊಲೀಸ್ ಹೇಳಿಕೆಯ ಪ್ರಕಾರ, ಎರಡು ಸಮುದಾಯಗಳ ನಡುವೆ ಸಾಮರಸ್ಯವನ್ನು ಕೆರಳಿಸುವ ಉದ್ದೇಶದಿಂದ ಘೋಷಣೆಗಳನ್ನು ಬರೆಯಲಾಗಿದೆ ಎನ್ನಲಾಗಿದೆ. ಆಕ್ಷೇಪಾರ್ಹ ರೀತಿಯಲ್ಲಿ ಬರೆದಿರುವುದನ್ನು ಗಮನಿಸಿದ ಹಾಸ್ಟೆಲ್ ವ್ಯವಸ್ಥಾಪಕರು ಪೊಲೀಸರಿಗೆ ದೂರು ನೀಡಿದ್ದಾರೆ. ದೂರಿನ ಆಧಾರದ ಮೇಲೆ, ಕಾರ್ಕಳ ಗ್ರಾಮೀಣ ಪೊಲೀಸರು ಭಾರತೀಯ ನ್ಯಾಯ ಸಂಹಿತೆಯ ಸೆಕ್ಷನ್ 353(2) ಅಡಿಯಲ್ಲಿ ಪ್ರಕರಣ ದಾಖಲಿಸಿದ್ದಾರೆ. ‘ಪ್ರಕರಣ ದಾಖಲಾಗಿದ್ದು, ನಾವು ಆರೋಪಿಗಳನ್ನು ಗುರುತಿಸುವ ಪ್ರಕ್ರಿಯೆಯಲ್ಲಿದ್ದೇವೆ’ ಎಂದು ಉಡುಪಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅರುಣ್ ಕೆ ಹೇಳಿದ್ದಾರೆ.

Share Information
Continue Reading
Advertisement
Click to comment

Leave a Reply

Your email address will not be published. Required fields are marked *