Connect with us

DAKSHINA KANNADA

ಪ್ರಚೋದನಕಾರಿ ಭಾಷಣ ಪ್ರಕರಣ​: ಹೈಕೋರ್ಟ್​ನಿಂದ ಕಲ್ಲಡ್ಕ ಪ್ರಭಾಕರ ಭಟ್​ಗೆ ಬಿಗ್​ ರಿಲೀಫ್

ಮಂಗಳೂರು, ಜೂನ್​ 03: ಆರ್​ಎಸ್​ಎಸ್​ ಮುಖಂಡ ಕಲ್ಲಡ್ಕ ಪ್ರಭಾಕರ ಭಟ್ ಅವರಿ​ಗೆ ಹೈಕೋರ್ಟ್​ ಬಿಗ್​ ರಿಲೀಫ್ ನೀಡಿದೆ. ಕಲ್ಲಡ್ಕ ಪ್ರಭಾಕರ ಭಟ್ ಅವರ ವಿರುದ್ಧ ಬಂಧನ ಸಹಿತ ಯಾವುದೇ ಒತ್ತಡದ ಕ್ರಮ ಕೈಗೊಳ್ಳದಂತೆ ನ್ಯಾ‌.ಕೃಷ್ಣಕುಮಾರ್ ಅವರಿದ್ದ ಹೈಕೋರ್ಟ್​ನ ಏಕಸದಸ್ಯ ಪೀಠ ಆದೇಶ ಹೊರಡಿಸಿ, ಜೂನ್ 10ಕ್ಕೆ ವಿಚಾರಣೆ ಮುಂದೂಡಿದ್ದಾರೆ. ಕಲ್ಲಡ್ಕ ಪ್ರಭಾಕರ ಭಟ್ ಪರ ಹಿರಿಯ ವಕೀಲ ಅರುಣ್ ಶ್ಯಾಮ್ ವಾದ ಮಾಡಿಸಿದರು.

ಪ್ರಕರಣ ರದ್ದು ಕೋರಿ ಕಲ್ಲಡ್ಕ ಪ್ರಭಾಕರ ಭಟ್ ಹೈಕೋರ್ಟ್​ಗೆ ಅರ್ಜಿ ಸಲ್ಲಿಸಿದರು. “ಭಾಷಣ ಮಾಡಿದ ಹಲವು ದಿನಗಳ ಬಳಿಕ ದುರುದ್ದೇಶದಿಂದ ಎಫ್​ಐಆರ್​ ದಾಖಲಿಸಲಾಗಿದೆ ಎಂದು ಕಲ್ಲಡ್ಕ ಪ್ರಭಾಕರ ಭಟ ಪರ ಹಿರಿಯ ವಕೀಲ ಅರುಣ್ ಶ್ಯಾಮ್ ವಾದ ಮಂಡಿಸಿದರು.

ವಾದ-ಪ್ರತಿವಾದ ಆಲಿಸಿದ ನ್ಯಾ.ಎಸ್.ಆರ್.ಕೃಷ್ಣಕುಮಾರ್ ಅವರಿದ್ದ ಹೈಕೋರ್ಟ್ ಪೀಠ, ಪೊಲೀಸರ ವಿಚಾರಣೆಗೆ ಅರ್ಜಿದಾರರು ಸಹಕರಿಸಬೇಕುಹೈಕೋರ್ಟ್ ಅನುಮತಿ ಇಲ್ಲದೇ ದೋಷಾರೋಪಪಟ್ಟಿ ಸಲ್ಲಿಸುವಂತಿಲ್ಲಯಾವುದೇ ಬಲವಂತದ ಕ್ರಮ ಕೈಗೊಳ್ಳದಂತೆ ಮಧ್ಯಂತರ ಆದೇಶ ನೀಡಿದೆ.

ಮೇ 12ರಂದು ಬಂಟ್ವಾಳದ ಕಾವಳಪಡೂರು ಗ್ರಾಮದ ಮದುವೆ ಪ್ಯಾಲೇಸ್ ಹಾಲ್​ನಲ್ಲಿ ಸುಹಾಸ್ ಶೆಟ್ಟಿ ಶ್ರದ್ಧಾಂಜಲಿ ಕಾರ್ಯಕ್ರಮ ನಡೆದಿತ್ತು. ಈ ವೇಳೆ ಸಮಾಜದ ಸ್ವಾಸ್ಥ್ಯ ಕೆಡುವುದು ಮತ್ತು ಗುಂಪುಗಳ ನಡುವೆ ದ್ವೇಷ ಬಿತ್ತುವಂತೆ ಕಲ್ಲಡ್ಕ ಪ್ರಭಾಕರ ಭಟ್ ಪ್ರಚೋದನಕಾರಿ ಹೇಳಿಕೆ ನೀಡಿದ್ದರು ಎಂಬ ಆರೋಪ ಕೇಳಿಬಂದಿತ್ತು. ಹೀಗಾಗಿ ಆರ್​ಎಸ್​ಎಸ್​​​ ಮುಖಂಡ ಕಲ್ಲಡ್ಕ ಪ್ರಭಾಕರ ಭಟ್ ಮೇಲೆ ದಕ್ಷಿಣ ಕನ್ನಡ ಜಿಲ್ಲೆ ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಬಿಎನ್​ಎಸ್​​ 353(2)ರಡಿ ಪ್ರಕರಣದಡಿ ಎಫ್​ಐಆರ್​ ದಾಖಲಾಗಿದೆ.

ಯಾರೆಲ್ಲಾ ವಿರುದ್ಧ ಎಫ್​ಐಆರ್​?

ಪ್ರಮೋದ್ ರೈ ನಂದುಗುರಿ, ತಿಲಕ್​ ನಂದುಗುರಿ, ಮೋಹನ ಕೆರೆಕೋಡಿ, ಚಂದ್ರಶೇಖರ ನೂಜಿಬಾಳ್ತಿಲ, ಮಹೇಶ್ ಕುಟ್ರುಪ್ಪಾಡಿ, ಡೀಕಯ್ಯ ನೂಜಿಬಾಳ್ತಿಲ, ಸುಜಿತ್ ಕುಟ್ರುಪ್ಪಾಡಿ, ಶರತ್ ನಂದುಗುರಿ, ಶ್ರೇಯತ್, ನಂದುಗುರಿ, ಉಮೇಶ್​ ನೂಜಿಬಾಳ್ತಿಲ, ರಾದಾಕೃಷ್ಣ. ಕೆ, ಜಯಂತ್​ ಮತ್ತು ಇತರೆ ಮೂವರ ಮೇಲೆ ದಕ್ಷಿಣ ಕನ್ನಡ ಜಿಲ್ಲೆಯ ಕಡಬ ಪೊಲೀಸ್ ಠಾಣೆಯಲ್ಲಿ ಎಫ್​ಐಆರ್​ ದಾಖಲಾಗಿದೆ.

Share Information
Continue Reading
Advertisement
Click to comment

Leave a Reply

Your email address will not be published. Required fields are marked *