Connect with us

    LATEST NEWS

    PSI ಮದನ್ ರಾಜಿನಾಮೇ ? ಬಿಜೆಪಿಯಿಂದ ಚುನಾವಣಾ ಅಖಾಡಕ್ಕೆ ಇಳಿಯಲು ಚಿಂತನೆ

    PSI ಮದನ್ ರಾಜಿನಾಮೇ ? ಬಿಜೆಪಿಯಿಂದ ಚುನಾವಣಾ ಅಖಾಡಕ್ಕೆ ಇಳಿಯಲು ಚಿಂತನೆ

    ಮಂಗಳೂರು,ಜನವರಿ 09 : ಪೋಲಿಸ್ ಸಬ್ ಇನ್ಸ್ ಪೆಕ್ಟರ್ ಮದನ್ ತಮ್ಮ ಪೋಲಿಸ್ ವೃತ್ತಿಗೆ ವಿದಾಯ ಹೇಳಲಿದ್ದಾರೆ. ಪ್ರಸ್ತುತ ಮಂಗಳೂರು ನಗರ ಪೋಲಿಸ್ ಕಮಿಷನರೇಟ್ ವ್ಯಾಪ್ತಿಯ ಬಜ್ಪೆ ಸ್ಟೇಷನ್ ನಲ್ಲಿ ಸಬ್ ಇನ್ಸ್ ಪೆಕ್ಟರಾಗಿ ಕರ್ತವ್ಯ ನಿರ್ವಹಿಸುತ್ತಿರುವ ಮದನ್ ತಮ್ಮ ಪೋಲಿಸ್ ವೃತ್ತಿಗೆ ಗುಡ್ ಬೈ ಹೆಳಿ ಸಕ್ರೀಯ ರಾಜಕೀಯಕ್ಕೆ ಇಳಿಯಲು ಚಿಂತನೆ ನಡೆಸಿದ್ದಾರೆ.

    ಈ ಸಂಬಂಧ ಈಗಾಗಲೇ ತಮ್ಮ ಆಪ್ತ ವಲಯದಲ್ಲಿ, ಸಂಘ ಸೇವಾಸಂಸ್ಥೆಗಳೊಂದಿಗೆ ಹಲವು ಸುತ್ತಿನ ಮಾತುಕತೆ ನಡೆಸಿದ್ದಾರೆ.

    ಬಲಪಂಥೀಯ ಒಲವುಳ್ಳ ಮದನ್ ಅವರು ಭಾರತೀಯ ಜನತಾ ಪಕ್ಷ ಸೇರಿ ಮುಂಬರುವ ವಿಧಾನ ಸಭಾ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿಯಾಗಿ ಕರಾವಳಿ ಭಾಗದಿಂದ ಚುನಾವಣಾ ಅಖಾಡಕ್ಕೆ ಇಳಿಯಲು ತೀರ್ಮಾನಿಸಿದ್ದು, ಸಂಘ ಪರಿವಾರದ ಮುಖಂಡರೊಂದಿಗೆ ಮಾತುಕತೆಯೂ ನಡೆದಿದೆ.

    ವಿದ್ಯಾರ್ಥಿ ಜೀವನದಲ್ಲಿ ಅವರು ಎಬಿವಿಪಿಯ ಸಕ್ರೀಯ ಸದಸ್ಯರಾಗಿದ್ದು ಅನೇಕ ಜವಾಬ್ದಾರಿಗಳನ್ನು ಯಶಸ್ವಿಯಾಗಿ ನಿಭಾಯಿಸಿದ್ದಾರೆ.

    ಮಂಗಳೂರು ಬಂದರ್ ಪೋಲಿಸ್ ಠಾಣೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿರುವಾಗ ಅನೇಕ ಸಾಮಾಜಿಕ ಕಾರ್ಯಗಳಲ್ಲಿ ತಮ್ಮನ್ನು ತೊಡಗಿಸಿಕೊಂಡಿದ್ದು, ಜನರ ವಿಶ್ವಾಸಕ್ಕೆ ಪಾತ್ರರಾಗಿದ್ದರು. ಈ ಹಿನ್ನೆಯಲ್ಲಿ ಬಿಜೆಪಿ ಟಿಕೆಟ್ ನೀಡಿದರೆ ಮಂಗಳೂರು ದಕ್ಷಿಣ ಕ್ಷೇತ್ರದಿಂದಲೇ ಚುನಾವಣಾ ಕಣಕ್ಕೆ ಇಳಿಯಲು ಚಿಂತನೆ ನಡೆಸಿದ್ದಾರೆ.

    Share Information
    Advertisement
    Click to comment

    You must be logged in to post a comment Login

    Leave a Reply