Connect with us

    KARNATAKA

    ಪಿಎಸ್ಐ ನೇಮಕಾತಿ ಅಕ್ರಮ – ಕಿಂಗ್ ಪಿನ್ ದಿವ್ಯಾ ಹಾಗರಗಿ ಅರೆಸ್ಟ್

    ಬೆಂಗಳೂರು ಎಪ್ರಿಲ್ 29: ಕೊನೆಗೂ ಪಿಎಸ್ಐ ನೇಮಕಾತಿ ಪರೀಕ್ಷೆಯ ಕಿಂಗ್ ಪಿನ್ ಅನ್ನು ಬಂಧಿಸಲು ಸಿಐಡಿ ಪೊಲೀಸರು ಯಶಸ್ವಿಯಾಗಿದ್ದಾರೆ. ಕಳೆದ ಮಧ್ಯರಾತ್ರಿ ಕಾರ್ಯಾಚರಣೆ ನಡೆಸಿದ ಸಿಐಡಿ ಪೊಲೀಸರು ಲೇಡಿ ಕಿಂಗ್ ಪಿನ್ ಆರೋಪಿ ದಿವ್ಯಾ ಹಾಗರಗಿ ಸೇರಿದಂತೆ ಮೂವರು ಆರೋಪಿಗಳ ಬಂಧಿಸಿದ್ದಾರೆ. ಬಂಧಿತರನ್ನು ದಿವ್ಯಾ ಹಾಗರಗಿ, ಸುನಿತಾ ಮತ್ತು ಅರ್ಚನಾ ಎಂದು ಗುರುತಿಸಲಾಗಿದೆ.


    ಪಿಎಸ್ಐ ನೇಮಕಾತಿ ಪರೀಕ್ಷೆಯಲ್ಲಿ ಅಕ್ರಮದ ಆರೋಪ ಕೇಳಿಬಂದು ಕಳೆದ 18 ದಿನಗಳಿಂದ ದಿವ್ಯಾ ಹಾಗರಗಿ ಮತ್ತು ಗ್ಯಾಂಗ್ ತಲೆಮರೆಸಿಕೊಂಡಿದ್ದರು. ಸರ್ಕಾರ ಪ್ರಕರಣವನ್ನು ಸಿಐಡಿಗೆ ಒಪ್ಪಿಸಿದಾಗಿನಿಂದ ಮೂರು ತಂಡಗಳಾಗಿ ರಚನೆ ಮಾಡಿದ್ದ ಸಿಐಡಿ ತಂಡ ಕೊನೆಗೂ ದಿವ್ಯಾ ಹಾಗರಗಿ ಮತ್ತು ಅವರ ಗ್ಯಾಂಗ್ ನ್ನು ಕಳೆದ ರಾತ್ರಿ ಮಹಾರಾಷ್ಟ್ರದ ಪುಣೆಯಲ್ಲಿ ಹೊಟೇಲ್ ನಲ್ಲಿ ರಾತ್ರಿ ಊಟ ಮಾಡುತ್ತಿದ್ದ ವೇಳೆ ಬಂಧಿಸಿದರು.

    ಕಲಬುರಗಿಯ ದಿವ್ಯಾ ಹಾಗರಗಿ ಮತ್ತು ಆಕೆಯ ಪತಿಯ ಒಡೆತನದ ಜ್ಞಾನಜ್ಯೋತಿ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಪಿಎಸ್ಐ ನೇಮಕಾತಿ ಪರೀಕ್ಷೆ ಕೇಂದ್ರವಿತ್ತು. ಈ ವೇಳೆ ಪರೀಕ್ಷೆಯಲ್ಲಿ ಅಕ್ರಮ ನಡೆದಿದೆ ಎಂದು ತಿಳಿದುಬಂದಿತ್ತು.

    Share Information
    Advertisement
    Click to comment

    Leave a Reply

    Your email address will not be published. Required fields are marked *