ಬೆಳ್ತಂಗಡಿ, ಮಾರ್ಚ್ 18: ನದಿಯಲ್ಲಿ ಈಜಲು ತೆರಳಿದ್ದ ದ್ವಿತೀಯ ಪಿಯುಸಿ ವಿದ್ಯಾರ್ಥಿಯೊಬ್ಬ ಮೃತಪಟ್ಟ ಘಟನೆ ಬೆಳ್ತಂಗಡಿ ತಾಲೂಕಿನ ಮುಂಡಾಜೆ ಸಮೀಪದ ಅರಸಮಜಲು ಎಂಬಲ್ಲಿ ಬುಧವಾರ ನಡೆದಿದೆ.

ಮೃತರನ್ನು ಸ್ಥಳೀಯ ನಿವಾಸಿ ನಿಶಾಂತ್ (16) ಎಂದು ಗುರುತಿಸಲಾಗಿದೆ. ಬುಧವಾರ ಮಧ್ಯಾಹ್ನದ ವೇಳೆ ಈತ ತನ್ನ ಸಂಬಂಧಿಕರ ಜೊತೆ ಮನೆ ಸಮೀಪದ ನೇತ್ರಾವತಿ ನದಿಗೆ ಈಜಲು ಹೋದಾಗ ಈ ಅವಘಡ ಸಂಭವಿಸಿದೆ. ನದಿಯಲ್ಲಿ ಮುಳುಗುತ್ತಿದ್ದ ನಿಶಾಂತ್ನನ್ನು ತಕ್ಷಣವೇ ರಕ್ಷಿಸಲು ಪ್ರಯತ್ನಿಸಲಾಯಿತಾದರೂ, ಅಷ್ಟರಲ್ಲಾಗಲೇ ಆತ ಮೃತಪಟ್ಟಿದ್ದ ಎಂದು ತಿಳಿದುಬಂದಿದೆ.