LATEST NEWS
ಆಳ್ವಾಸ್ ವಿದ್ಯಾಸಂಸ್ಥೆಯಲ್ಲಿ ಡೆತ್ ನೋಟ್ ನೋಟ್ ಬರೆದಿಟ್ಟು ವಿದ್ಯಾರ್ಥಿ ಆತ್ಮಹತ್ಯೆ
ಆಳ್ವಾಸ್ ವಿದ್ಯಾಸಂಸ್ಥೆಯಲ್ಲಿ ಡೆತ್ ನೋಟ್ ನೋಟ್ ಬರೆದಿಟ್ಟು ವಿದ್ಯಾರ್ಥಿ ಆತ್ಮಹತ್ಯೆ
ಮಂಗಳೂರು, ಜನವರಿ 09 : ಆಳ್ವಾಸ್ ವಿದ್ಯಾಸಂಸ್ಥೆಯಲ್ಲಿ ವ್ಯಾಸಾಂಗ ಮಾಡುತ್ತಿದ್ದ ಪ್ರಥಮ ಪಿಯುಸಿ ವಿದ್ಯಾರ್ಥಿ ಯೋರ್ವ ಆತ್ಮಹತ್ಯೆ ಮಾಡಿಕೊಂಡಿದ್ದಾನೆ.
ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿಯನ್ನು ಹಾಸನ ಮೂಲದ ತೇಜಸ್ ಎಂದು ಗುರುತಿಸಲಾಗಿದೆ.
17 ವರ್ಷದ ಈತ ಆಳ್ವಾಸ್ ನಲ್ಲಿ ಪ್ರಥಮ ಪಿಯುಸಿ ಎಲೆಕ್ಟ್ರಾನಿಕ್ಸ್ ವಿಭಾಗದಲ್ಲಿ ಕಲಿಯುತ್ತಿದ್ದ. ನಿನ್ನೆ ರಾತ್ರಿ 9 ಗಂಟೆಗೆ ಹಾಸ್ಟೆಲ್ ನಲ್ಲಿ ಡೆತ್ ನೋಟ್ ಬರೆದಿಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದು, ಈ ಬಗ್ಗೆ ಆತ ಬರೆದ ಡೆತ್ ನೋಟ್ ಪೋಲಿಸರು ವಶಪಡಿಸಿಕೊಂಡಿದ್ದಾರೆ. ತನ್ನ ಪೋಷಕರ ಹಾಗೂ ಗೆಳೆಯರ ಸಮಸ್ಯೆಯಿಂದ ಆತ್ಮಹತ್ಯೆ ಮಾಡಿಕೊಂಡಿರುವುದಾಗಿ ಡೆತ್ ನೋಟ್ ನೋಟಿನಲ್ಲಿ ಈತ ಬರೆದುಕೊಂಡಿದ್ದು, ಪೊಲಿಸರು ಪರಿಶೀಲನೆ ನಡೆಸುತ್ತಿದ್ದಾರೆ. ಮೂಡಬಿದಿರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.
You must be logged in to post a comment Login