Connect with us

    KARNATAKA

    ಸಾರ್ವಜನಿಕ ಗಣೇಶೋತ್ಸವ ವಿಚಾರದಲ್ಲಿ ರಾಜ್ಯ ಸರಕಾರದ ಯೂ ಟರ್ನ್; ನಿಯಮಗಳೊಂದಿಗೆ ಸಾರ್ವಜನಿಕ ಗಣೇಶೋತ್ಸವಕ್ಕೆ ಅವಕಾಶ

    ಬೆಂಗಳೂರು ಅಗಸ್ಟ್ 18: ಸಾರ್ವಜನಿಕ ಗಣೇಶೋತ್ಸವಕ್ಕೆ ಸಂಪೂರ್ಣ ನಿರ್ಬಂಧ ಹೇರಿದ್ದ ರಾಜ್ಯ ಸರಕಾರ ಹಬ್ಬಕ್ಕೆ ಇನ್ನು ಕೆಲವೇ ದಿನಗಳಿರುವಾದ ಈಗ ಯೂ ಟರ್ನ್ ಹೊಡೆದಿದ್ದು, ನಿಯಮಗಳನುಸಾರವಾಗಿ ಸಾರ್ವಜನಿಕ ಗಣೇಶೋತ್ಸವ ನಡೆಸಲು ಅವಕಾಶ ನೀಡಿದೆ.


    ಈ ಕುರಿತಂತೆ ಮಾರ್ಗ ಸೂಚಿಗಳನ್ನು ಬಿಡುಗಡೆಗೊಳಿಸಿರುವ ರಾಜ್ಯ ಸರಕಾರ ಇದೀಗ ತಮ್ಮ ಮನೆಗಳಲ್ಲಿ, ಸರ್ಕಾರಿ, ಖಾಸಗಿ, ಸಾರ್ವಜನಿಕ ಬಯಲು ಪ್ರದೇಶಗಳಲ್ಲಿ ಕನಿಷ್ಠ ಸಂಖ್ಯೆಯೊಂದಿಗೆ ಗಣೇಶ ಮೂರ್ತಿ ಸ್ಥಾಪಿಸಿ, ಗಣೇಶೋತ್ಸವ ಆಚರಣೆಗೆ ಅವಕಾಶ ನೀಡಿದೆ.
    ಈ ಕುರಿತಂತೆ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರು, ಗಣೇಶೋತ್ಸವ ಆಚರಿಸುವ ಸಂಬಂಧ ಪರಿಷ್ಕೃತ ಮಾರ್ಗಸೂಚಿಗಳನ್ನು ಪ್ರಕಟಿಸಿದೆ.

     

    ಈ ಹೊಸ ಪರಿಷ್ಕೃತ ಮಾರ್ಗಸೂಚಿಯಂತೆ ಸರಳ ರೀತಿಯಲ್ಲಿ ಭಕ್ತಿಪೂರ್ವಕವಾಗಿ ಹೆಚ್ಚು ಜನರು ಸೇರದಂತೆ ಗಲ್ಲಿ ಗಲ್ಲಿ ಗಳಲ್ಲಿ ಆಚರಿಸಲು ಅವಕಾಶ ನೀಡದೇ, ವಾರ್ಡ್ ಗೆ ಒಂದರಂತೆ, ಏರಿಯಾಗೆ ಒಂದರಂತೆ, ಗ್ರಾಮಗಳಲ್ಲಿ ಒಂದರಂತೆ ಸ್ಥಾಪಿಸಿ, ಗಣೇಶೋತ್ಸವ ಆಚರಿಸಲು ಅವಕಾಶ ನೀಡಿದೆ.

    ಹೊಸ ಗಣೇಶೋತ್ಸವ ಆಚರಿಸುವ ಸಂಬಂಧದ ಪರಿಷ್ಕೃತ ಮಾರ್ಗಸೂಚಿಗಳು

    ಶ್ರೀ ಗಣೇಶ ಚತುರ್ಥಿ ಹಬ್ಬವನ್ನು ಸರಳ ರೀತಿಯಲ್ಲಿ ಭಕ್ತಿ ಪೂರ್ವಕವಾಗಿ ದೇವಸ್ಥಾನದೊಳಗೆ, ತಮ್ಮ ಮನೆಗಳಲ್ಲಿ ಅಥವಾ ಸರ್ಕಾರಿ, ಖಾಸಗಿ, ಸಾರ್ವಜನಿಕ ಬಯಲು ಪ್ರದೇಶಗಳಲ್ಲಿ ಕನಿಷ್ಠ ಸಂಖ್ಯೆಯೊಂದಿಗೆ ಆಚರಿಸಬಹುದು

    ಈ ರೀತಿ ಸಾರ್ವಜನಿಕ ಸ್ಥಳಗಳಲ್ಲಿ ಗಣೇಶ ಮೂರ್ತಿಯನ್ನು ಪ್ರತಿಷ್ಠಾಪಿಸುವವರು ಗಣೇಶ ಮೂರ್ತಿಯನ್ನು ನಾಲ್ಕು ಅಡಿ ಎತ್ತರ ಮೀರದಂತೆ ಹಾಗೂ ಮನೆಯೊಳಗೆ ಎರಡು ಅಡಿ ಮೀರದಂತೆ ಪ್ರತಿಷ್ಠಾಪಿಸುವುದು

    ಪಾರಂಪರಿಕ ಗಣೇಶೋತ್ಸವಕ್ಕಾಗಿ ಗಣೇಶೋತ್ಸವ ಸಮಿತಿಗಳು, ಮಂಡಳಿಗಳು, ಗಣೇಶ ಮೂರ್ತಿಯನ್ನು ಪ್ರತಿಷ್ಠಾಪನೆ ಮಾಡಲು ಮುನಿಸಿಪಲ್ ಕಾರ್ಪೊರೇಷನ್, ಸ್ಥಳೀಯ ಆಡಳಿತದಿಂದ ಪೂರ್ವಾನುಮತಿಯನ್ನು ಪಡೆಯತಕ್ಕದ್ದು. ಒಂದು ವಾರ್ಡಿಗೆ, ಗ್ರಾಮಕ್ಕೆ ಒಂದು ಸಾರ್ವಜನಿಕ ಗಣೇಶೋತ್ಸವವನ್ನು ಆಚರಿಸಲು ಪ್ರೋತ್ಸಾಹಿಸುವುದು.

    ಇಂತಹ ಸ್ಥಳಗಳಲ್ಲಿ 20 ಜನಕ್ಕೆ ಸೀಮಿತವಾದ ಆವರಣವನ್ನು ನಿರ್ಮಿಸುವುದು. ಒಮ್ಮೆಲೆ 20ಕ್ಕಿಂತ ಹೆಚ್ಚಿನ ಜನ ಸೇರದಂತೆ ಭಕ್ತಾದಿಗಳಿಗೆ ಅನುವು ಮಾಡುವುದು.

    ಗಣೇಶ ಮೂರ್ತಿ ಪ್ರತಿಷ್ಠಾಪನೆ ಸ್ಥಳದಲ್ಲಿ ಯಾವುದೇ ರೀತಿಯ ಸಾಂಸ್ಕೃತಿಕ, ಸಂಗೀತ, ನೃತ್ಯ ಇನ್ನಿತರ ಯಾವುದೇ ಮನರಂಜನಾ ಕಾರ್ಯಕ್ರಮಗಳನ್ನು ಆಯೋಜಿಸಲು ಅವಕಾಶವಿರುವುದಿಲ್ಲ

    ಗಣೇಶ ಮೂರ್ತಿಗಳನ್ನು ತರುವಾಗ ಹಾಗೂ ವಿಸರ್ಜಿಸುವಾಗ ಯಾವುದೇ ಕಾರಣಕ್ಕಾಗಲಿ ಅಥವಾ ಯಾವುದೇ ಸಂದರ್ಭಗಳಲ್ಲಿ ಯಾವುದೇ ರೀತಿಯ ಮೆರವಣಿಗೆ ಹೊರಡಿಸತಕ್ಕದ್ದಲ್ಲ, ಮಾಡತಕ್ಕದ್ದಲ್ಲ, ಇದನ್ನು ಸಂಪೂರ್ಣವಾಗಿ ನಿರ್ಬಂಧಿಸಿದೆ.

    ಗಣೇಶ ಮೂರ್ತಿ ಮತ್ತು ಮನೆಯಲ್ಲಿ ವಿಗ್ರಹಗಳನ್ನು ಪೂಜಿಸಿದ ನಂತ್ರ ಪಾಲಿಕೆ, ಸ್ಥಳೀಯ ಸಂಸ್ಥೆಗಳು, ನಿರ್ಮಿಸಿರುವ ಹೊಂಡ ಅಥವಾ ಮೊಬೈಲ್ ಟ್ಯಾಂಕ್ ಅಥವಾ ಕೃತಕ ವಿಸರ್ಜನಾ ಟ್ಯಾಂಕರ್ ಗಳಲ್ಲಿ ವಿಸರ್ಜಿಸುವುದು

    Share Information
    Advertisement
    Click to comment

    You must be logged in to post a comment Login

    Leave a Reply