Connect with us

    DAKSHINA KANNADA

    ಜನವರಿ 17ರಂದು ಮುಲ್ಕಿಯಲ್ಲಿ ‘ಲೋಕಾಯುಕ್ತ ಜನ ಸಂಪರ್ಕ ಸಭೆ’; ದೂರುಗಳಿದ್ದರೆ ಸಲ್ಲಿಸಿ..

    ಮಂಗಳೂರು : ಮಂಗಳೂರು ಲೋಕಾಯುಕ್ತ ವಿಭಾಗದ ಪೊಲೀಸ್ ಅಧೀಕ್ಷಕರು, ಪೊಲೀಸ್ ಉಪಾಧೀಕ್ಷಕರು ಹಾಗೂ ಪೊಲೀಸ್ ನಿರೀಕ್ಷಕರು ಜನವರಿ 17ರಂದು ಮುಲ್ಕಿಯಲ್ಲಿ ಲೋಕಾಯುಕ್ತ ಜನ ಸಂಪರ್ಕ ಸಭೆಯನ್ನು ಆಯೋಜನೆ ಮಾಡಿದ್ದಾರೆ.

    ಸರ್ಕಾರಿ ಕಛೇರಿಗಳಲ್ಲಿ ಅಧಿಕೃತ ಕೆಲಸಗಳಲ್ಲಿ ವಿಳಂಬ ಹಾಗೂ ಇನ್ನಿತರೇ ತೊಂದರೆ ನೀಡುತ್ತಿರುವ ಸರಕಾರಿ ಅಧಿಕಾರಿ/ನೌಕರರ ವಿರುದ್ಧ ಸಾರ್ವಜನಿಕರು ದೂರುಗಳನ್ನು ನೀಡಬಹುದಾಗಿದೆ. ಸಾರ್ವಜನಿಕರು ಈ ಅವಕಾಶವನ್ನು ಸದುಪಯೋಗ ಪಡಿಸಿಕೊಳ್ಳಲು ಕೋರಲಾಗಿದೆ.
    ದಿನಾಂಕ: 17-01-2024 ರಂದು ಬೆಳಿಗ್ಗೆ 11-00 ಗಂಟೆಯಿಂದ ಮುಲ್ಕಿ ತಾಲೂಕಿನ ಮುಲ್ಕಿ ನಗರ ಪಂಚಾಯತ್ ಸಮುದಾಯ ಭವನ ಇಲ್ಲಿ “ಲೋಕಾಯುಕ್ತ ಜನ ಸಂಪರ್ಕ ಸಭೆ” ಯನ್ನು ಆಯೋಜಿಸಲಾಗಿರುತ್ತದೆ.
    ಇದಲ್ಲದೇ ಉಳಿದ ದಿನಗಳಲ್ಲೂ ಕಛೇರಿ ವೇಳೆಯಲ್ಲಿ ಸಹ ಸಾರ್ವಜನಿಕರು ತಮ್ಮ ಅಹವಾಲು/ದೂರುಗಳನ್ನು ನೀಡಬಹುದಾಗಿದೆ ಅಥವಾ ದೂರವಾಣಿ ಮೂಲಕವೂ ಸಂಪರ್ಕಿಸಬಹುದಾಗಿದೆ. ಸಾರ್ವಜನಿಕರು ಇದರ ಸದುಪಯೋಗವನ್ನು ಪಡೆಯುವಂತೆ ಕೋರಲಾಗಿದೆ.

    ಅರ್ಜಿದಾರರು ನಮೂನೆ 1 & II ರಲ್ಲಿ ಭರ್ತಿ ಮಾಡಿ ಅಫಿದಾವಿತ್ ಮಾಡಿ ಸಲ್ಲಿಸಿದ ಅರ್ಜಿಗಳನ್ನು ಈ ಕಛೇರಿಗೆ ಅಥವಾ ನೇರವಾಗಿ ಮಾನ್ಯ ನಿಬಂಧಕರು, ಕರ್ನಾಟಕ ಲೋಕಾಯುಕ್ತ, ಬಹುಮಹಡಿಗಳ ಕಟ್ಟಡ, ಡಾ/ಬಿ.ಆರ್. ಅಂಬೇಡ್ಕರ್ ವೀಧಿ, ಬೆಂಗಳೂರು-560001 ರವರಿಗೆ ಸಲ್ಲಿಸುವುದು.

    ಸಂಪರ್ಕಿಸಬಹುದಾದ ದೂರವಾಣಿ ಸಂಖ್ಯೆಗಳು

    ಪೊಲೀಸ್ ಅಧೀಕ್ಷಕರ ಕಛೇರಿ

    0824-2950997

    ಪೊಲೀಸ್ ಉಪಾಧೀಕ್ಷಕರು-1 ಕಛೇರಿ

    0824-2453420

    9364062579

    ಪೊಲೀಸ್ ಉಪಾಧೀಕ್ಷಕರು-2 ಕಛೇರಿ

    0824-2453420

    9364062580

    ಪೊಲೀಸ್ ನಿರೀಕ್ಷಕರು-1 ಕಛೇರಿ

    9364062517

    0824-2427237

    9364062691

    Share Information
    Advertisement
    Click to comment

    You must be logged in to post a comment Login

    Leave a Reply