Connect with us

    LATEST NEWS

    ಕೆಲಸ ಮಾಡದ ಜನಪ್ರತಿನಿಧಿಗಳು.. ರಸ್ತೆ ಗುಂಡಿ ಮುಚ್ಚುತ್ತಿರುವ ಸಾರ್ವಜನಿಕರು…!

    ಕೆಲಸ ಮಾಡದ ಜನಪ್ರತಿನಿಧಿಗಳು.. ರಸ್ತೆ ಗುಂಡಿ ಮುಚ್ಚುತ್ತಿರುವ ಸಾರ್ವಜನಿಕರು…!

    ಮಂಗಳೂರು ನವೆಂಬರ್ 19: ಶಾಸಕರಿಂದ, ಸಂಸದರಿಂದ ಆಗದ ಕೆಲಸವನ್ನು ಈಗ ಸಾರ್ವಜನಿಕರೇ ಕೈಗೆತ್ತಿಕೊಂಡು ಸಮಸ್ಯೆ ಸರಿಪಡಿಸುವತ್ತ ಹೆಜ್ಜೆ ಇಟ್ಟಿದ್ದಾರೆ. ಜಿಲ್ಲೆಯಲ್ಲೇ ಮೊದಲಬಾರಿಗೆ ಈ ರೀತಿ ಪರಿಸ್ಥಿತಿ ಬಂದೊದಗಿದ್ದು, ಮಂಗಳೂರಿನ ರಸ್ತೆ ಸರಿಪಡಿಸಿ ಎಂದು ಜನಪ್ರತಿನಿಧಿಗಳಿಗೆ ದುಂಬಾಲು ಬಿದ್ದ ಸಾಕಾಗಿ ಜನರೇ ರಸ್ತೆ ದುರಸ್ಥಿ ಮಾಡಬೇಕಾಗಿದೆ.

    ಕರಾವಳಿಯ ಉದ್ಯಮಿ ಗಿಲ್ಬರ್ಟ್ ಡಿಸೋಜಾ ಅವರು ಇಂಡಿಯನ್ ಸರ್ವಿಸ್ ಕ್ಲಬ್‌ನ ತಂಡದ ಸದಸ್ಯರ ಜೊತೆ ಮಂಗಳೂರಿನ ನಗರದಲ್ಲಿರುವ ರಸ್ತೆ ಗುಂಡಿಗಳನ್ನು ಮುಚ್ಚಲು ಮುಂದಾಗಿದ್ದಾರೆ. ಈಗಾಗಲೇ ಇವರು ಅಂಬೇಡ್ಕರ್ (ಜ್ಯೋತಿ) ವೃತ್ತ, ಮಿಲಾಗ್ರೆಸ್ ಮತ್ತು ಸ್ಟೇಟ್ ಬ್ಯಾಂಕ್ ಗಳಲ್ಲಿ ರಸ್ತೆ ಗುಂಡಿಗಳನ್ನು ಮುಚ್ಚಿದ್ದಾರೆ. ರಸ್ತೆ ಗುಂಡಿಗಳನ್ನು ಮುಚ್ಚಲು ಸ್ವತಹ ತಮ್ಮದೇ ಖರ್ಚಿನಲ್ಲಿ ಜೆಸಿಬಿ, ಟಿಪ್ಪರ್ ಲಾರಿ, ಮರಳು ಮತ್ತು ಇಂಟರ್ಲಾಕ್ ಗಳ ವ್ಯವಸ್ಥೆಯನ್ನು ಮಾಡಿದ್ದಾರೆ.

    ಅವರ ಈ ಕಾರ್ಯಕ್ಕೆ ಶ್ಲಾಘಿಸಿದ ಟ್ರಾಫಿಕ್ ಪೊಲೀಸರು ಮತ್ತು ಟ್ರಾಫಿಕ್ ವಾರ್ಡನ್‌ಗಳು ರಸ್ತೆಯಲ್ಲಿ ಕಾಮಗಾರಿ ನಡೆಯುತ್ತಿರುವಾಗ ಸಂಚಾರವನ್ನು ನಿಯಂತ್ರಿಸುವಲ್ಲಿ ಸಹಾಯ ಮಾಡಿದ್ದಾರೆ. ಈ ಕಾರ್ಯದಲ್ಲಿ ಸಿವಿಕ್ ಗುಂಪಿನ ಸದಸ್ಯರು ಹಾಗೂ ಸಂಚಾರ ಪೊಲೀಸ್ ಸಿಬ್ಬಂದಿಗಳು ಕೂಡಾ ಸೇರಿಕೊಂಡು ನಗರದ ರಸ್ತೆಗಳ ಸುವ್ಯವಸ್ಥೆಗಾಗಿ ಗಿಲ್ಬರ್ಟ್ ಅವರು ತೆಗೆದುಕೊಂಡ ಕ್ರಮವನ್ನು ಪ್ರೋತ್ಸಾಹಿಸಿದರು.
    ಈ ಸಂದರ್ಭ ಸ್ಥಳಕ್ಕೆ ಭೇಟಿ ನೀಡಿದ ಪೊಲೀಸ್ ಕಮಿಷನರ್ ಡಾ.ಪಿ.ಎಸ್. ಹರ್ಷ ಅವರು ಸಮಾಜಮುಖಿಯಾಗಿ ಕೆಲಸ ಮಾಡುತ್ತಿರುವ ಗಿಲ್ಬರ್ಟ್‌ರ ನಾಯಕತ್ವದ ತಂಡವನ್ನು ಶ್ಲಾಘಿಸಿದ್ದಾರೆ. ಹಾಗೆಯೇ ಈ ತಂಡಕ್ಕೆ ಅಗತ್ಯವಿರುವ ಎಲ್ಲಾ ವ್ಯವಸ್ಥೆಗಳನ್ನು ಮಾಡುವಂತೆ ಪೊಲೀಸರಿಗೆ ಸೂಚಿಸಿದ್ದಾರೆ.

    Share Information
    Advertisement
    Click to comment

    You must be logged in to post a comment Login

    Leave a Reply