KARNATAKA
ಪಬ್ಲಿಕ್ ಟಿವಿ ಶಿವಮೊಗ್ಗ ಜಿಲ್ಲಾ ವರದಿಗಾರ ಶಶಿಧರ್ ನಿಧನ
ಶಿವಮೊಗ್ಗ ಜನವರಿ 11: ಅಕಾಲಿಕ ಅನಾರೋಗ್ಯದಿಂದ ಬಳಲುತ್ತಿದ್ದ ಪಬ್ಲಿಕ್ ಟಿವಿಯ ಶಿವಮೊಗ್ಗ ಜಿಲ್ಲಾ ವರದಿಗಾರ ಶಶಿಧರ್ ಚಿಕಿತ್ಸೆ ಫಲಕಾರಿಯಾಗದೇ ನಿಧನರಾಗಿದ್ದಾರೆ.
ಪಬ್ಲಿಕ್ ಟಿವಿಯಲ್ಲಿ ಕಳೆದ 6 ವರ್ಷಗಳಿಂದ ಶಿವಮೊಗ್ಗ ಜಿಲ್ಲಾ ಹಿರಿಯ ವರದಿಗಾರರಾಗಿ ಸೇವೆ ಸಲ್ಲಿಸುತ್ತಿದ್ದರು. ಶಶಿಧರ್ ಮೂಲತಃ ಅರಸೀಕೆರೆ ತಾಲ್ಲೂಕಿನ ಕಲ್ಲಹಳ್ಳಿ ಗ್ರಾಮದವರಾಗಿದ್ದು, 40 ವರ್ಷ ವಯಸ್ಸಾಗಿತ್ತು. ಮೃತರು ಪತ್ನಿ, ತಂದೆ-ತಾಯಿಯನ್ನು ಅಗಲಿದ್ದಾರೆ. ಶಶಿಧರ್ ಕಳೆದ 16 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿ ಸೇವೆ ಸಲ್ಲಿಸಿದ್ದು, ಪಬ್ಲಿಕ್ ಟಿವಿ ಬಳಗ ಶಶಿಧರ್ ನಿಧನಕ್ಕೆ ಸಂತಾಪ ಸೂಚಿಸಿದೆ.