KARNATAKA
ಪಿಯುಸಿ ವಿದ್ಯಾರ್ಥಿಗಳು ಕಾಲೇಜಿಗೆ ಬೈಕ್ ತರುವಂತಿಲ್ಲ : ಸಂಚಾರ ವಿಭಾಗದ ಪೊಲೀಸ್ ಆಯುಕ್ತ ರವಿಕಾಂತೇಗೌಡ
ಬೆಂಗಳೂರು, ಜುಲೈ 06 : ಪಿಯುಸಿ ವಿದ್ಯಾರ್ಥಿಗಳು ಕಾಲೇಜಿಗೆ ದ್ವಿಚಕ್ರ ವಾಹನ ತರುವಂತಿಲ್ಲ ಎಂದು ಸಂಚಾರ ವಿಭಾಗದ ಜಂಟಿ ಪೊಲೀಸ್ ಆಯುಕ್ತ ರವಿಕಾಂತೇಗೌಡ ಹೇಳಿದ್ದಾರೆ.
ಮಾಧ್ಯಮದೊಂದಿಗೆ ಮಾತನಾಡಿದ ಅವರು, ಪಿಯುಸಿ ವಿದ್ಯಾರ್ಥಿಗಳು ಕಾಲೇಜಿಗೆ ದ್ವಿಚಕ್ರ ವಾಹನ ತರುವಂತಿಲ್ಲ, ಯಾಕೆಂದರ ವಿದ್ಯಾರ್ಥಿಗಳು ಇನ್ನೂ ಡಿಎಲ್ ಪಡೆಯಲು ಅರ್ಹತೆ ಆಗಿರೋದಿಲ್ಲ.ಹೀಗಾಗಿ ಕಾಲೇಜಿಗೆ ಬೈಕ್ ತರುವಂತಿಲ್ಲ ಎಂದು ಹೇಳಿದ್ದಾರೆ.
ಇನ್ನು ನಗರದಲ್ಲಿ ನಕಲಿ ನಂಬರ್ ಪ್ಲೇಟ್ ಹೊಂದಿರುವ ವಾಹನಗಳು ಸಿಗುತ್ತಿವೆ. ನಕಲಿ ನಂಬರ್ ವಾಹನಗಳ ಮಾಲೀಕರನ್ನು ಬಂಧಿಸಿ ಜೈಲಿಗೆ ಕಳುಹಿಸಲಾಗುತ್ತಿದೆ. ಜೂನ್ ತಿಂಗಳಲ್ಲಿ 22 ವಾಹನ ಸವಾರರು ಮದ್ಯ ಸೇವಿಸಿ ಅಪಘಾತದಲ್ಲಿ ಸಾವನ್ನಪ್ಪಿದ್ದಾರೆ. ಯಾರೂ ಮದ್ಯ ಕುಡಿದು ವಾಹನ ಚಾಲನೆ ಮಾಡಬೇಡಿ ಎಂದು ಮನವಿ ಮಾಡಿದ್ದಾರೆ.
You must be logged in to post a comment Login