LATEST NEWS
ಸ್ಕೂಟರ್ ಗೆ ಟಿಪ್ಪರ್ ಡಿಕ್ಕಿ – ಸ್ಕೂಟರ ಸವಾರ ಸಾವು

ಮಂಗಳೂರು ಜೂನ್ 14: ಟಿಪ್ಪರ್ ಮತ್ತು ಸ್ಕೂಟರ್ ನಡುವೆ ನಡೆದ ಭೀಕರ ರಸ್ತೆ ಅಪಘಾತದಲ್ಲಿ ಸ್ಕೂಟರ್ ಸವಾರ ಸಾವನಪ್ಪಿದ ಘಟನೆ ಮಂಗಳೂರಿನ ಪಂಪ್‌ವೆಲ್ ನಲ್ಲಿ ನಡೆದಿದೆ. ಮೃತರನ್ನು ಇಚ್ಚಂಪಾಡಿ ಇಲ್ಲುಂಗಲ್ ನಿವಾಸಿ ಆಂಟನಿ ಹಾಗೂ ವಾಮನ ದಂಪತಿ ಪುತ್ರ ಸಂದೇಶ್ (25ವ.) ಎಂದು ಗುರುತಿಸಲಾಗಿದೆ.
ಇವರು ಬೆಂದೂರ್‌ವೆಲ್‌ನಲ್ಲಿ ಸಾಫ್ಟ್ ವೇರ್ ಕಂಪನಿಯಲ್ಲಿ ಉದ್ಯೋಗಿಯಾಗಿದ್ದು, ರಾತ್ರಿ ಪಾಳಿಯ ಕೆಲಸ ಮುಗಿಸಿ ತನ್ನ ಸ್ಕೂಟಿಯಲ್ಲಿ ರೂಮ್ ಗೆ ತೆರಳುವ ವೇಳೆ ಪಂಪ್ ವೆಲ್ ನಲ್ಲಿ ಈ ಅಪಘಾತ ಸಂಭವಿಸಿದೆ. ಗಂಭೀರ ಗಾಯಗೊಂಡಿದ್ದ ಸಂದೇಶ್ ಅವರು ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ ಎಂದು ವರದಿಯಾಗಿದೆ. ಮೃತರು ಇಬ್ಬರು ಸಹೋದರರನ್ನು ಅಗಲಿದ್ದಾರೆ.
