LATEST NEWS
ಪಂಪ್ ವೆಲ್ ಪ್ಲೈಓವರ್ ಬಳಿ ಕೃತಕ ನೆರೆ ಮಾಧ್ಯಮ ಸೃಷ್ಠಿ – ಎನ್ಎಚ್ಎಐ ಇಂಜಿನಿಯರ್ ಶಿಶುಮೋಹನ್ ಆರೋಪ
ಮಂಗಳೂರು ಜುಲೈ 18: ಪಂಪ್ ವೆಲ್ ಪ್ಲೈಓವರ್ ಕಳಗೆ ಉಂಟಾಗುತ್ತಿರುವ ಕೃತಕ ನೆರೆ ಮಾಧ್ಯಮಗಳ ಸೃಷ್ಠಿ ಎಂದು ರಾ.ಹೆ.ಪ್ರಾಧಿಕಾರದ ಕಾರ್ಯಕಾರಿ ಇಂಜಿನಿಯರ್ ಶಿಶುಮೋಹನ್ ಆರೋಪಿಸಿದ್ದಾರೆ.
ಪಂಪ್ವೆಲ್, ಕೊಟ್ಟಾರ ಚೌಕಿ ಹಾಗೂ ತೊಕ್ಕೊಟ್ಟು ಮೇಲ್ಸೇತುವೆ ತಳಭಾಗದಲ್ಲಿ ಮಳೆಯ ಸಂದರ್ಭ ಕೃತಕ ನೆರೆ ಸೃಷ್ಟಿಯಾ ಗುತ್ತಿರುವ ಬಗ್ಗೆ ದೂರು ಬರುತ್ತಿರುವುದಾಗಿ ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ. ಅವರು ಸಂಸದ ನಳಿನ್ ಕುಮಾರ್ ಕಟೀಲ್ ಅಧ್ಯಕ್ಷತೆಯಲ್ಲಿ ನಡೆದ ದಿಶಾ ಸಮಿತಿ ಸಭೆಯಲ್ಲಿ ಪ್ರಸ್ತಾಪಿಸಿದರು.
ಈ ಬಗ್ಗೆ ಪ್ರತಿಕ್ರಿಯಿಸಿದ ರಾ.ಹೆ.ಪ್ರಾಧಿಕಾರದ ಕಾರ್ಯಕಾರಿ ಇಂಜಿನಿಯರ್ ಶಿಶುಮೋಹನ್, ಪಂಪ್ವೆಲ್ನಲ್ಲಿ ನೀರು ನಿಲ್ಲುವುದು ಮಾಧ್ಯಮದ ಸೃಷ್ಟಿ. ಅವರು ಕ್ಯಾಮರಾದಲ್ಲಿ ಝೂಮ್ ಮಾಡಿ ತೋರಿಸುತ್ತಿದ್ದಾರೆ ಎಂದರು.
ಈ ಸಂದರ್ಭ ಜಿಲ್ಲಾಧಿಕಾರಿ ಮಾತನಾಡಿ, ಕೊಟ್ಟಾರ ಚೌಕಿ, ಪಂಪ್ವೆಲ್ ಹಾಗೂ ತೊಕ್ಕೊಟ್ಟು ಪ್ರದೇಶಗಳಲ್ಲಿ ಮಳೆ ನೀರು ನಿಂತು ಸಂಚಾರಕ್ಕೆ ತೊಂದರೆಯಾಗುವ ಕುರಿತಂತೆ ಸ್ಥಳೀಯಾಡಳಿತ ನೋಡಲ್ ಅಧಿಕಾರಿಗಳನ್ನು ನೇಮಿಸಿ ಪರಿಶೀಲನೆ ನಡೆಸಿ ವರದಿ ನೀಡಬೇಕೆಂದು ಸೂಚಿಸಿದರು.
You must be logged in to post a comment Login