Connect with us

    LATEST NEWS

    ಪುನಿತ್ ರಾಜ್ ಕುಮಾರ್ ಹೆಸರಲ್ಲಿ ಪುನಿತ್ ರಾಜ್ ಕುಮಾರ್ ಹೃದಯ ಜ್ಯೋತಿ ಯೋಜನೆ ಜಾರಿ

    ಮಂಗಳೂರು ನವೆಂಬರ್ 1: ದಿವಂಗತ ಪುನಿತ್ ರಾಜ್ ಕುಮಾರ್ ಹೆಸರಲ್ಲಿ ಪುನಿತ್ ರಾಜ್ ಕುಮಾರ್ ಹೃದಯ ಜ್ಯೋತಿ ಯೋಜನೆಯನ್ನು ಮುಂದಿನ ತಿಂಗಳಿನಿಂದ ರಾಜ್ಯಾದ್ಯಂತ ಜಾರಿ ತರಲಾಗುವುದು ಎಂದು ದಕ್ಷಿಣಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಹೇಳಿದರು.


    ದಕ್ಷಿಣ ಕನ್ನಡ ಜಿಲ್ಲಾಡಳಿತದ ವತಿಯಿಂದ ಇಲ್ಲಿ ಏರ್ಪಡಿಸಿದ್ದ ಕರ್ನಾಟಕ ರಾಜ್ಯೋತ್ಸವ ಸಮಾರಂಭದಲ್ಲಿ ಧ್ವಜಾರೋಹಣ ನೆರವೇರಿಸಿ, ಗೌರವ ವಂದನೆ ಸ್ವೀಕರಿಸಿ ಅವರು ಬುಧವಾರ ಮಾತನಾಡಿದರು. ರಾಜ್ ಕುಮಾರ್ ಹೃದಯ ಜ್ಯೋತಿ ಯೋಜನೆ ಮೂಲಕ ರಾಜ್ಯದಲ್ಲಿ 85 ಜಿಲ್ಲೆ ಮತ್ತು ತಾಲೂಕುಗಳಲ್ಲಿ ಇಸಿಜಿ ಜೊತೆಗೆ ಹಠಾತ್ ಹೃದಯಾಘಾತ ಆಗುವುದನ್ನು ತಡೆಯಲು ಉಚಿತವಾಗಿ ಇಂಜೆಕ್ಷನ್ ನೀಡಲಾಗುವುದು ಎಂದರು. ಅಲ್ಲದೆ ಜಯದೇವ ಸೇರಿದಂತೆ ರಾಜ್ಯದ 16 ಸೂಪರ್ ಸ್ಪೇಷಾಲಿಟಿ ಆಸ್ಪತ್ರೆಯಲ್ಲಿ ಹೃದಯ ಶಸ್ತ್ರ ಚಿಕಿತ್ಸೆಯನ್ನು ಕಾರ್ಯಕ್ರಮದ ಮೂಲಕ ನೀಡಲಾಗುವುದು ಎಂದರು.


    ಕನ್ನಡ ಭಾಷೆಯನ್ನು ಶ್ರೀಮಂತಗೊಳಸುವುದರ ಜೊತೆ ತುಳು, ಕೊಂಕಣಿ ಮತ್ತು ಬ್ಯಾರಿ ಭಾಷೆಗಳ ಸಾಹಿತ್ಯ ಹಾಗೂ ಸಂಸ್ಕೃತಿಗಳಿಗೂ ಸರ್ಕಾರ ಉತ್ತೇಜನ ನೀಡಲಿದೆ’ ಎಂದು ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಹೇಳಿದರು.
    ಒಟ್ಟು 47 ಮಂದಿಗೆ ಹಾಗೂ 17 ಸಂಸ್ಥೆ ಗಳಿಗೆ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪ್ರದಾನ ಮಾಡಲಾಯಿತು.

    Share Information
    Advertisement
    Click to comment

    Leave a Reply

    Your email address will not be published. Required fields are marked *