ಸ್ಯಾಂಡಲ್ ವುಡ್ ನಟ ದಿ. ಪವರ್ ಸ್ಟಾರ್ ಪುನೀತ್ ರಾಜ್ಕುಮಾರ್ ಅವರ 800 ಕೆ.ಜಿ ತೂಕದ ಕಂಚಿನ ಪ್ರತಿಮೆಯನ್ನು ಬೆಂಗಳೂರಿನ ಸ್ಯಾಂಕಿ ಕೆರೆಯ ಮುಂಭಾಗದಲ್ಲಿರುವ ಟ್ರಯಾಂಗಲ್ ಪಾರ್ಕ್ ನಲ್ಲಿ ಮಾರ್ಚ್ 20 ರಂದು ಲೋಕಾರ್ಪಣೆ ಮಾಡಲಾಗಿದೆ.

ಅಶ್ವಿನಿ ಪುನೀತ್ ರಾಜ್ಕುಮಾರ್ ಅವರು ಪ್ರತಿಮೆಯನ್ನು ಅನಾವರಣಗೊಳಿಸಿದರು. ಬಳಿಕ ಮಾತನಾಡಿದ ಅವರು ‘ಪ್ರತಿಮೆ ಚೆನ್ನಾಗಿದೆ. ಅಭಿಮಾನಿಗಳಿಗೆ ಮತ್ತು ಅಶ್ವತ್ಥ್ ನಾರಾಯಣ ಅವರಿಗೆ ಧನ್ಯವಾದ ಹೇಳುತ್ತೇನೆ’ ಎಂದರು.
ಈ ವೇಳೆ ಮಾತನಾಡಿದ ಶಾಸಕ ಅಶ್ವತ್ಥ್ ನಾರಾಯಣ ಅವರು ನಮ್ಮನೆಚ್ಚಿನ ನಟ ಪುನೀತ್ ರಾಜ್ ಕುಮಾರ್ ಅವರ ಮೆಚ್ಚಿನ ಸ್ಥಳ ಸದಾಶಿವ ನಗರ. ಇಲ್ಲಿ ಅವರ ಪ್ರತಿಮೆ ಆಗಬೇಕು ಎಂಬ ಬೇಡಿಕೆ ಇತ್ತು. ಇದಕ್ಕೆ ಸ್ಫೂರ್ತಿಯ ಪ್ರತಿಮೆ ಎಂದು ಹೆಸರಿಡಲಾಗಿದೆ. ಎಲ್ಲರ ಸಲಹೆ ಪಡೆದು ಪ್ರತಿಮೆ ಮಾಡಲಾಗಿದೆ. ಯುಗಾದಿ ಹಬ್ಬದ ಸಂಧರ್ಭದಲ್ಲಿ ಉದ್ಘಾಟನೆ ಮಾಡಲಾಗಿದೆ. ರಾಜ್ಯ ಸರ್ಕಾರಕ್ಕೆ, ಅಭಿಮಾನಿಗಳಿಗೆ, ಪುನೀತ್ ಕುಟುಂಬಕ್ಕೆ ಧನ್ಯವಾದಗಳು’ ಎಂದರು. ಈ ಸಂದರ್ಭ ಕನ್ನಡ ಚಿತ್ರರಂಗದ ಹಿರಿಯ ನಿರ್ದೇಶಕ ರಾಜೇಂದ್ರ ಸಿಂಗ್ ಬಾಬು ಸೇರಿದಂತೆ ಹಲವು ಮಂದಿಅತಿಥಿ-ಗಣ್ಯರು ಭಾಗಿಯಾಗಿದ್ದರು.