Connect with us

    BELTHANGADI

    ಪುಂಜಾಲಕಟ್ಟೆ – ಸೈನೆಡ್ ಸೇವಿಸಿ ಯುವಕ ಆತ್ಮಹತ್ಯೆ

    ಬೆಳ್ತಂಗಡಿ, ಜುಲೈ 13:ಸೈನೆಡ್ ಸೇವಿಸಿ ಯುವಕನೋರ್ವ ಆತ್ಮಹತ್ಯೆಗೆ ಶರಣಾದ ಘಟನೆ ಪುಂಜಾಲಕಟ್ಟೆಯಲ್ಲಿ ಸಂಭವಿಸಿದೆ. ಮೃತಪಟ್ಟ ಯುವಕನನ್ನು ಪುಂಜಾಲಕಟ್ಟೆ ಪ್ರಾಥಮಿಕ ಆರೋಗ್ಯ ಕೇಂದ್ರದ ಬಳಿಯ ನಿವಾಸಿ ರೂಪೇಶ್ ಆಚಾರ್ಯ(31) ಎಂದು ಗುರುತಿಸಲಾಗಿದೆ.


    ಚಿನ್ನದ ಕುಸುರಿ ಕೆಲಸಗಾರರಾಗಿದ್ದ ರೂಪೇಶ್ ಅವರು ಸ್ಥಳೀಯ ಸಂಸ್ಥೆಯಲ್ಲಿ ನೌಕರರಾಗಿದ್ದು, ಇತ್ತೀಚೆಗೆ ಕೆಲಸ ಬಿಟ್ಟಿದ್ದರು. ಮದ್ಯವ್ಯಸನಿಯಾಗಿದ್ದ ಅವರು ಗುರುವಾರ ಮಧ್ಯಾಹ್ನ ತನ್ನ ಕೊಠಡಿಯಲ್ಲಿ ಸೈನೇಡ್ ಸೇವಿಸಿದ್ದರು. ಇದನ್ನು ಗಮನಿಸಿದ ಮನೆ ಮಂದಿ ಕೂಡಲೇ 108 ಅಂಬ್ಯುಲೆನ್ಸ್ ಮೂಲಕ ಮಂಗಳೂರು ಖಾಸಗಿ ಆಸ್ಪತ್ರೆಗೆ ಸಾಗಿಸಿದರಾದರೂ ಅಲ್ಲಿ ಅವರು ಮೃತಪಟ್ಟಿದ್ದರು.
    ಗಣೇಶ್ ಅವರ ಮೂವರು ಮಕ್ಕಳಲ್ಲಿ ಹಿರಿಯವನಾಗಿದ್ದ ರೂಪೇಶ್ ವಿವಾಹಿತನಾಗಿದ್ದು, ಪತ್ನಿ, ಪುಟ್ಟ ಮಗುವನ್ನು ಅಗಲಿದ್ದಾರೆ.

    Share Information
    Advertisement
    Click to comment

    You must be logged in to post a comment Login

    Leave a Reply