FILM
ಕಾಲ್ತುಳಿತ ಪ್ರಕರಣ – ನಟ ಅಲ್ಲು ಅರ್ಜುನ್ ಅರೆಸ್ಟ್
ಹೈದರಾಬಾದ್ ಡಿಸೆಂಬರ್ 13: ಪುಷ್ಟ 2 ಚಿತ್ರದ ಪ್ರಿಮಿಯರ್ ಶೋ ವೇಳೆ ಉಂಟಾದ ಕಾಲ್ತುಳಿತ ಸಂದರ್ಭ ಮಹಿಳೆ ಸಾವಿನ ಪ್ರಕರಣಕ್ಕೆ ಸಂಬಂಧಿಸಿದಂತೆ ನಟ ಅಲ್ಲು ಅರ್ಜುನ್ ನನ್ನು ಚೀಕಟಪಲ್ಲಿ ಪೊಲೀಸರು ಅರೆಸ್ಟ್ ಮಾಡಿದ್ದಾರೆ.
ಕೆಲ ದಿನಗಳ ಹಿಂದೆ ‘ಪುಷ್ಪ 2’ ಸಿನಿಮಾ ಬಿಡುಗಡೆ ವೇಳೆ ಅಲ್ಲು ಅರ್ಜುನ್ ಸಂಧ್ಯಾ ಚಿತ್ರಮಂದಿರಕ್ಕೆ ಭೇಟಿ ನೀಡಿದ್ದರು. ಈ ವೇಳೆ ನಡೆದ ಕಾಲ್ತುಳಿತದಲ್ಲಿ ಒಬ್ಬ ಮಹಿಳೆ ನಿಧನ ಹೊಂದಿದ್ದರು. ಅವರ ಪುತ್ರ ತೀವ್ರವಾಗಿ ಗಾಯಗೊಂಡಿದ್ದರು. ಈ ಘಟನೆ ಕುರಿತಂತೆ ನಟ ಅಲ್ಲು ಅರ್ಜುನ್ ಹಾಗೂ ಇನ್ನೂ ಇತರರ ವಿರುದ್ಧ ದೂರು ದಾಖಲಾಗಿತ್ತು. ಇದೀಗ ನಟ ಅಲ್ಲು ಅರ್ಜುನ್ ಹಾಗೂ ಅವರ ಬಾಡಿಗಾರ್ಡ್ ಇನ್ನಿತರರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.
సంధ్య థియేటర్ ఘటన కేసులో అల్లు అర్జున్ అరెస్ట్ ..#alluarjun #pushpa2 #alluarjunarrest #tv9telugu #breakingnews pic.twitter.com/xbph6jYHGS
— TV9 Telugu (@TV9Telugu) December 13, 2024