LATEST NEWS
ಪುತ್ತಿಗೆಶ್ರೀಗಳ ವಿಶ್ವತೋಮುಖ ವ್ಯಕ್ತಿತ್ವ ಅರಿಯದೆ ವಿಕೃತ ಮನಸ್ಸಿನವರು ಸಮಾಜದಲ್ಲಿ ಒಡಕು ಮೂಡಿಸುತ್ತಿದ್ದಾರೆ

ಉಡುಪಿ ಫೆಬ್ರವರಿ 02: ಸಾಮಾಜಿಕ ಜಾಲತಾಣದಲ್ಲಿ ವಿವಾದ ಸೃಷ್ಠಿಸಿರುವ ಪುತ್ತಿಗೆ ಶ್ರೀಗಳ ಹಳೆಯ ಪೋಟೋ ವಿಚಾರಕ್ಕೆ ಇದೀಗ ಪುತ್ತಿಗೆ ಮಠದ ಸ್ಪಷ್ಟನೆ ನೀಡಿದ್ದು, ಸಮಾಜದಲ್ಲಿ ಒಡಕು ಉಂಟು ಮಾಡಲು ಈ ರೀತಿ ಮಾಡಲಾಗುತ್ತಿದೆ ಎಂದು ತಿಳಿಸಿದ್ದಾರೆ.
ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿರುವ ಪೋಟೋ ಹತ್ತು ವರ್ಷಗಳ ಹಿಂದೆ ನಡೆದ ಕಾರ್ಯಕ್ರಮವಾಗಿದ್ದು, ಅದ್ವೈತ ಆಚಾರ್ಯರೊಬ್ಬರು ಹಿಂದಿಯಲ್ಲಿ ಬರೆದ ಪುಸ್ತಕದ ಕನ್ನಡ ಅನುವಾದ ಇದಾಗಿತ್ತು, ಇಸ್ಲಾಂ ಆತಂಕ್ ಯಾ ಆದರ್ಶ್ ಪುಸ್ತಕದ ಕನ್ನಡ ಅನುವಾದವನ್ನು ಶ್ರೀಗಳು ಬಿಡುಗಡೆ ಮಾಡಿದ್ದರು, ಆದರೆ ಶ್ರೀಗಳ ವಿಶ್ವತೋಮುಖ ವ್ಯಕ್ತಿತ್ವ ಅರಿಯದೆ ಕೆಲವು ವಿಕೃತ ಮನಸ್ಸಿನವರು ಸಮಾಜದಲ್ಲಿ ಒಡಕು ಮೂಡಿಸುತ್ತಿದ್ದಾರೆ.

ಜನಾಂಗಗಳ ನಡುವೆ ಪರಸ್ಪರ ಸೌಹಾರ್ದ ಬೆಳೆಸುವ ನಿಟ್ಟಿನಲ್ಲಿ ಈ ಕಾರ್ಯಕ್ರಮ ನಡೆದಿತ್ತು, ಸಾಧು ಸಂತರು ಪೀಠಾಧಿಪತಿಗಳು ಶಾಂತಿ ಸೌಹಾರ್ದತೆಗೆ ಮೊದಲ ಆದ್ಯತೆ ನೀಡುತ್ತಾ ಬಂದಿದ್ದಾರೆ. ಸನಾತನ ಧರ್ಮದ ಮೊದಲ ಆದ್ಯತೆ ಕೂಡ ಶಾಂತಿ ಸೌಹಾರ್ದತೆ, ಪುತ್ತಿಗೆ ಶ್ರೀಗಳು ಮೊದಲಿನಿಂದಲೂ ಭಯೋತ್ಪಾದನೆಯನ್ನು ತೀಕ್ಷ್ಣವಾಗಿ ಖಂಡಿಸಿದ್ದಾರೆ. ವಿಶ್ವಸಂಸ್ಥೆಯ ಅಂಗಸಂಸ್ಥೆಯಾಗಿರುವ ರಿಲಿಜನ್ ಫಾರ್ ಪೀಸ್ ಇದರ ಅಂತರಾಷ್ಟ್ರೀಯ ಅಧ್ಯಕ್ಷರಾಗಿದ್ದಾರೆ. ಇಸ್ಲಾಂ ದೇಶ ಸಹಿತ ಪ್ರಪಂಚದ ಅನೇಕ ರಾಷ್ಟ್ರಗಳಲ್ಲಿ ಭಯೋತ್ಪಾದನೆಯ ವಿರುದ್ಧ ಅಭಿಪ್ರಾಯ ರೂಪಿಸಿದ್ದಾರೆ. ಅಮೇರಿಕಾದ ಶ್ವೇತ ಭವನದಲ್ಲೂ ಭಯೋತ್ಪಾದನೆಯ ವಿರುದ್ಧ ಮಾತನಾಡಿದ್ದಾರೆ. ಜೀವ ಬೆದರಿಕೆಗಳನ್ನು ಲೆಕ್ಕಿಸದೆ ಈ ಕೆಲಸ ಮಾಡುತ್ತಾ ಬಂದಿದ್ದಾರೆ ಎಂದು ಶ್ರೀಗಳ ಆಪ್ತ ಹೆಜಮಾಡಿ ಸುಧೀಂದ್ರ ಆಚಾರ್ಯ ಸ್ಪಷ್ಟನೆ ನೀಡಿದ್ದಾರೆ.