UDUPI
ಪುತ್ತಿಗೆ ಮಠದ ಸುಗುಣೇಂದ್ರ ತೀರ್ಥ ಸ್ವಾಮೀಜಿಗೆ ಕೊರೊನಾ

ಉಡುಪಿ, ಜುಲೈ 21 : ಉಡುಪಿ ಪುತ್ತಿಗೆ ಮಠದ ಸುಗುಣೇಂದ್ರ ತೀರ್ಥ ಸ್ವಾಮೀಜಿಗೆ ಕೊರೊನಾ ಸೊಂಕು ತಗುಲಿರುವುದು ದೃಢವಾಗಿದ್ದು, ಅವರನ್ನು ಮಣಿಪಾಲ ಕೆಎಂಸಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.
ಸುಗುಣೇಂದ್ರ ಶ್ರೀಗಳಿಗೆ ಜ್ವರ ಕಾಣಿಸಿಕೊಂಡ ಹಿನ್ನಲೆಯಲ್ಲಿ ತಪಾಸಣೆಗೆಂದು ಆಸ್ಪತ್ರೆಗೆ ತೆರಳಿದ್ದರು. ಈ ವೇಳೆ ಅವರ ಗಂಟಲ ದ್ರವ ಪರೀಕ್ಷೆಗೆ ರವಾನಿಸಲಾಗಿತ್ತು. ಮಂಗಳವಾರ ವರದಿ ಕೈ ಸೇರಿದ್ದು, ಕೊರೊನಾ ಪಾಸಿಟಿವ್ ಬಂದಿರುವ ಹಿನ್ನೆಲೆಯಲ್ಲಿ ಮಣಿಪಾಲ ಆಸ್ಪತ್ರೆಗೆ ಶ್ರೀಗಳನ್ನು ದಾಖಲಿಸಲಾಗಿದೆ. ಸ್ವಾಮೀಜಿಗಳು ಇಂದಿನಿಂದ ಪಾಡಿಗಾರು ಮಠದಲ್ಲಿ ಚಾರ್ತುಮಾಸ ವ್ರತವನ್ನು ಅರಂಭಿಸಬೇಕಾಗಿತ್ತು. ಸದ್ಯ ಅವರ ಆರೋಗ್ಯ ಸದ್ಯ ಸ್ಥಿರವಾಗಿದ್ದು, ಅವರು ಶೀಘ್ರ ಗುಣಮುಖರಾಗುವಂತೆ ಭಕ್ತವೃಂದ ಪ್ರಾರ್ಥಿಸುತ್ತಿದ್ದಾರೆ.
