DAKSHINA KANNADA
ಅರುಣ್ ಕುಮಾರ್ ಪುತ್ತಿಲ ಬಿಜೆಪಿ ಸೇರ್ಪಡೆಗೆ ಪುತ್ತಿಲ ಪರಿವಾರದಲ್ಲೇ ವಿರೋಧ….!!?
ಪುತ್ತೂರು ಫೆಬ್ರವರಿ 01: ಪುತ್ತೂರಿನಲ್ಲಿ ಬಿಜೆಪಿಗೆ ಬಂಡಾಯದ ಬಾವುಟ ಹಾರಿಸಿದ್ದ ಅರುಣ್ ಕುಮಾರ್ ಪುತ್ತಿಲ ಇದೀಗ ಬಿಜೆಪಿ ಪಕ್ಷಕ್ಕೆ ಸೇರ್ಪಡೆಯಾಗುತ್ತಾರೆ ಎಂಬ ಸುದ್ದಿ ನಡುವೆ, ಅರುಣ್ ಕುಮಾರ್ ಪುತ್ತಿಲ ಬಿಜೆಪಿ ಸೇರ್ಪಡೆಗೆ ಅವರದೇ ಪುತ್ತಿಲ ಪರಿವಾರದಲ್ಲೇ ವಿರೋಧ ವ್ಯಕ್ತವಾಗಿದೆ.
ಇತ್ತೀಚೆಗೆ ಅರುಣ್ ಕುಮಾರ್ ಪುತ್ತಿಲ ಬಿಜೆಪಿಗೆ ಸೇರ್ಪಡೆಯಾಗುತ್ತಾರೆ ಎಂಬ ಸುದ್ದಿ ಹರಡಿತ್ತು, ಅರುಣ್ ಕುಮಾರ್ ಪುತ್ತಿಲ ಬಹುತೇಕ ಬಿಜೆಪಿ ಸೇರ್ಪಡೆಗೆ ಒಪ್ಪಿಕೊಂಡಿದ್ದಾರೆ ಎಂಬ ಸುದ್ದಿ ಹರಿದಾಡುತ್ತಿದೆ. ಈ ಹಿನ್ನಲೆ ಇದೀಗ ಅರುಣ್ ಕುಮಾರ್ ಪುತ್ತಿಲ ಅವರ ಪುತ್ತಿಲ ಪರಿವಾರದಲ್ಲಿ ಬಿಜೆಪಿ ಸೇರ್ಪಡೆ ಬಗ್ಗೆ ವಿರೋಧ ವ್ಯಕ್ತವಾಗಿದೆ. ಪುತ್ತಿಲ ಪರಿವಾರದ ಕಾರ್ಯಕರ್ತರು ಬಿಜೆಪಿ ಸೇರ್ಪಡೆಗೆ ವಿರೋಧ ವ್ಯಕ್ತಪಡಿಸಿದ್ದಾರೆ.ಈ ಹಿನ್ನಲೆ ಇದೀಗ ಪುತ್ತಿಲ ಪರಿವಾರದ ಪ್ರಸನ್ನ ಮಾರ್ತ ಅಧ್ಯಕ್ಷತೆಯಲ್ಲಿ ಕಾರ್ಯಕರ್ತರ ಜೊತೆ ಸಮಾಲೋಚನೆ ನಡೆಸಲು ಸಭೆ ಕರೆಯಲಾಗಿದೆ. ಫೆಬ್ರವರಿ 5 ರಂದು ಪುತ್ತೂರಿನ ಕೋಟೆಚಾಹಾಲ್ ನಲ್ಲಿ ಸಮಾಲೋಚನಾ ಸಮಾವೇಶ ನಡೆಯಲಿದೆ. ಪುತ್ತಿಲ ಪರಿವಾರದ ಕಾರ್ಯಕರ್ತರು ಹಾಗೂ ಪುತ್ತಿಲ ನಡುವೆ ಸಮಾಲೋಚನಾ ಸಭೆಗೆ ನಿರ್ಧಾರ ಮಾಡಲಾಗಿದ್ದು. ಲೋಕಸಭಾ ಚುನಾವಣೆಗೆ ಕೆಲ ತಿಂಗಳು ಬಾಕಿ ಇರುವಾಗ್ಲೇ ಈ ಸಭೆ ಬಹಳಷ್ಟು ಮಹತ್ವ ಪಡೆದುಕೊಂಡಿದೆ.
ಈ ನಡುವೆ ಲೋಕಸಭೆಗೆ ಅರುಣ್ ಕುಮಾರ್ ಪುತ್ತಿಲ ಪಕ್ಷೇತರರಾಗಿ ಸ್ಪರ್ಧಿಸುವಂತೆ ಕಾರ್ಯಕರ್ತರು ಒತ್ತಡ ಹಾಕುತ್ತಿದ್ದಾರೆ. ಆದರೂ ಬಿಜೆಪಿಗೆ ಸೇರ್ಪಡೆಗೆ ಅರುಣ್ ಕುಮಾರ್ ಪುತ್ತಿಲ ಮುಂದಾಗಿದ್ದಾರೆ ಎನ್ನಲಾಗಿದೆ. ಬಿಜೆಪಿ ಸೇರ್ಪಡೆಗೆ ಕಾರ್ಯಕರ್ತರು ಪುತ್ತಿಲ ನಡುವೆ ನಡೆಯುತ್ತಾ ಹೊಂದಾಣಿಕೆ ನಡೆಯುತ್ತಾ , ಅಥವಾ ಕಾರ್ಯಕರ್ತರ ವಿರೋಧದ ನಡುವೆಯೇ ಬಿಜೆಪಿಗೆ ಸೇರ್ಪಡೆಯಾಗ್ತಾರಾ ಪುತ್ತಿಲ…? ಎನ್ನುವ ಕೂತೂಹಲಕ್ಕೆ ತೆರೆ ಎಳೆಯುತ್ತಾ ಫೆಬ್ರವರಿ 5 ರ ಪರಿವಾರದ ಸಭೆ ಉತ್ತರ ನೀಡಲಿದೆ.