LATEST NEWS
ಕೊರೊನಾ ಲಸಿಕೆ ಕಂಡು ಹಿಡಿದ ರಷ್ಯಾ…ಅಧ್ಯಕ್ಷರ ಮಗಳಿಗೆ ಮೊದಲ ಲಸಿಕೆ

ಮಾಸ್ಕೊ: ಕೊರೊನಾ ಸೊಂಕಿನ ವಿರುದ್ದದ ಹೊರಾಟದಲ್ಲಿ ರಷ್ಯಾ ಮುಂಚೂಣಿಯಲ್ಲಿದ್ದು, ಇದೀಗ ವಿಶ್ವದ ಮೊದಲ ಕೊವಿಡ್ 19 ಲಸಿಕೆ ಬಿಡುಗಡೆ ಮಾಡಿದೆ. ಅಲ್ಲದೆ ರಷ್ಯಾದ ಅದ್ಯಕ್ಷ ಪುಟಿನ್ ಅವರ ಒಬ್ಬಳು ಮಗಳಿಗೆ ಈ ಲಸಿಕೆಯನ್ನು ನೀಡಲಾಗಿದೆ.
ರಷ್ಯಾದಲ್ಲಿ ಅಭಿವೃದ್ಧಿ ಪಡಿಸಲಾಗಿರುವ ಕೋವಿಡ್–19 ಲಿಸಿಕೆ ಕೆಲವೇ ದಿನಗಳಲ್ಲಿ ಜನರ ಬಳಕೆಗೆ ಬಿಡುಗಡೆಯಾಗಲಿದೆ. ರಷ್ಯಾದ ಆರೋಗ್ಯ ಸಚಿವಾಲಯ ಅಗತ್ಯವಿರುವ ಎಲ್ಲ ಅನುಮೋದನೆಗಳನ್ನು ನೀಡಿದ್ದು, ಆ ಮೂಲಕ ಜಗತ್ತಿನ ಮೊದಲ ಕೋವಿಡ್–19 ಲಸಿಕೆ ಇಂದು ದಾಖಲಾಗಿದೆ.
ಮಾಸ್ಕೊದ ಗಮೆಲಿಯಾ ಸಂಶೋಧನಾ ಸಂಸ್ಥೆ ಮತ್ತು ರಷ್ಯಾದ ರಕ್ಷಣಾ ಸಚಿವಾಲಯದ ಜಂಟಿಯಾಗಿ ಲಸಿಕೆ ಅಭಿವೃದ್ಧಿ ಪಡಿಸಿದೆ. ಎರಡು ತಿಂಗಳಿಗೂ ಕಡಿಮೆ ಅವಧಿಯಲ್ಲಿ ಮನುಷ್ಯರ ಮೇಲೆ ಪ್ರಯೋಗ ನಡೆಸಲಾಗಿದೆ. ದೇಶದಲ್ಲಿ ಅಭಿವೃದ್ಧಿ ಪಡಿಸಲಾಗಿರುವ ಕೊರೊನಾ ವೈರಸ್ ಲಸಿಕೆಯನ್ನು ಬಳಕೆಗೆ ನೋಂದಾಯಿಸಲಾಗಿದೆ.

ಇಂದು ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಅವರ ಒಬ್ಬಳು ಮಗಳಿಗೆ ಲಸಿಕೆ ನೀಡುವುದರ ಮೂಲಕ ಇಡೀ ಜಗತ್ತಿಗೆ ಕೊರೊನಾಗೆ ಲಸಿಕೆ ಕಂಡು ಹಿಡಿದಿರುವ ಬಗ್ಗೆ ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಹೇಳಿದ್ದಾರೆ. ಎರಡು ಮತ್ತು ಮೂರನೇ ಹಂತದ ಪ್ರಯೋಗಗಳಲ್ಲಿ ಭಾಗಿಯಾದ ಎಲ್ಲ 38 ಜನರಲ್ಲಿಯೂ ರೋಗ ನಿರೋಧಕ ಶಕ್ತಿ ಉತ್ಪತ್ತಿಯಾಗಿರುವುದನ್ನು ಗಮನಿಸಿರುವುದಾಗಿ ರಷ್ಯಾ ರಕ್ಷಣಾ ಸಚಿವಲಯ ಹೇಳಿದೆ.
ಜೂನ್ 18ರಿಂದ ಕ್ಲಿನಿಕಲ್ ಟ್ರಯಲ್‌ಗಳನ್ನು (ಮನುಷ್ಯರ ಮೇಲೆ) ಆರಂಭಿಸಲಾಗಿತ್ತು. ಪ್ರಯೋಗಕ್ಕೆ ಒಳಗಾದವರ ಪೈಕಿ ಮೊದಲ ಗುಂಪು ಜುಲೈ 15ರಂದು ಸಂಶೋಧನಾ ಕೇಂದ್ರಗಳಿಂದ ಬಿಡುಗಡೆಯಾಗಿದೆ ಹಾಗೂ ಎರಡನೇ ಗುಂಪು ಜುಲೈ 20ರಂದು ಮನೆಗೆ ಮರಳಿದೆ.