DAKSHINA KANNADA
ಪುತ್ತೂರು: ಚಾಲಕನ ನಿಯಂತ್ರಣ ತಪ್ಪಿ ಹೊಳೆಗೆ ಬಿದ್ದ ಕೆಮಿಕಲ್ ಸಾಗಾಟದ ಲಾರಿ
ಪುತ್ತೂರು, ಜುಲೈ 14: ಕೆಮಿಕಲ್ ಸಾಗಾಟದ ಲಾರಿಯೊಂದು ಚಾಲಕನ ನಿಯಂತ್ರಣ ತಪ್ಪಿ ಹೆದ್ದಾರಿ ಬದಿಯ ಹೊಳೆಗೆ ಬಿದ್ದ ಘಟನೆ ನಿನ್ನೆ ನೆಲ್ಯಾಡಿಯ ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿ 75ರ ಬಜತ್ತೂರು ಗ್ರಾಮದ ನೀರಕಟ್ಟೆಯಲ್ಲಿ ನಡೆದಿದೆ.
ಘಟನೆಯಿಂದಾಗಿ ಲಾರಿ ಚಾಲಕ ಹಾಗೂ ಸಹಾಯಕ ಸಣ್ಣಪುಟ್ಟ ಗಾಯಗೊಂಡು ಅಪಾಯದಿಂದ ಪಾರಾಗಿದ್ದಾರೆ ಎಂದು ತಿಳಿದು ಬಂದಿದೆ. ನೆಲ್ಯಾಡಿ ಸಂಚಾರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
You must be logged in to post a comment Login