DAKSHINA KANNADA
ಪುತ್ತೂರು: ಹಣದ ವಿಚಾರದಲ್ಲಿ ವ್ಯಕ್ತಿಯ ಅಪಹರಣ ಮಾಡಿ ಕೊಲೆ ಬೆದರಿಕೆ
![](https://i0.wp.com/themangaloremirror.in/wp-content/uploads/2024/04/For-Advertisement-Please-Contact-1.jpg?fit=728%2C90&ssl=1)
ಪುತ್ತೂರು, ಜನವರಿ 20: ಹಣದ ವಿಚಾರದಲ್ಲಿ ತಂಡವೊಂದು ವ್ಯಕ್ತಿಯನ್ನು ಅಪಹರಣ ಮಾಡಿ, ಸಹೋದರನ ಮಾಹಿತಿಯನ್ನು ಪಡೆಯುವ ಜತೆಗೆ ಹಣಕ್ಕೆ ಬೇಡಿಕೆ ಇಟ್ಟು ಕೊಲೆ ಬೆದರಿಕೆ ಹಾಕಿದ ಘಟನೆ ನಡೆದಿದೆ.
ಕೊಯಿಲ ನಿವಾಸಿ ನಿಝಾಮ್ (25) ಆಸ್ಪತ್ರೆಯಗೆ ದಾಖಲಾಗಿದ್ದಾರೆ. ಸಹೋದರ ಶಾರೂಕ್ (23) ಅವರನ್ನು ಅಪಹರಣ ಮಾಡಿದ್ದಾರೆಂದು ಹೇಳಲಾಗಿದೆ.
![](https://i0.wp.com/themangaloremirror.in/wp-content/uploads/2024/06/IMG-20240626-WA0023.jpg?fit=1280%2C670&ssl=1)
ಮಂಗಳೂರಿನ ಮಲ್ಲೂರು ಭಾಗಕ್ಕೆ ಕರೆದುಕೊಂಡು ಹೋಗಿ ಹಲ್ಲೆ ನಡೆಸಿ, ಹಣ ನೀಡುವಂತೆ ಬೇಡಿಕೆ ಇಟ್ಟಿದ್ದಾರೆ. ಸಹೋದರನ ಮಾಹಿತಿ ಪಡೆದು ಆತನನ್ನು ಅಪಹರಣ ಮಾಡಿ ಹಣ ತರದೇ ಹೋದರೆ ತಮ್ಮನನ್ನು ಕೊಲೆ ಮಾಡುವುದಾಗಿ ಹೇಳಿದ್ದಾರೆ ಎಂದು ನಿಝಾಮ್ ಹೇಳಿದ್ದಾರೆ. ಪುತ್ತೂರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.