DAKSHINA KANNADA
ಪುತ್ತೂರು: ಮನೆಗೆ ನುಗ್ಗಿ ಯುವತಿಗೆ ಚೂರಿ ಇರಿತ, ದಾರಿ ಮಧ್ಯೆ ಯುವತಿ ಮೃತ್ಯು
ಪುತ್ತೂರು, ಜನವರಿ 17: ಮನೆಯಂಗಳದಲ್ಲೇ 23 ವರ್ಷದ ಯುವತಿಗೆ ವ್ಯಕ್ತಿಯೊಬ್ಬ ಚೂರಿ ಇರಿದು ಪರಾರಿಯಾದ ಘಟನೆ ಜ.17ರಂದು ಮುಂಡೂರು ಸಮೀಪದ ಕಂಪದಲ್ಲಿ ನಡೆದಿದೆ.
ಮೃತ ಯುವತಿಯನ್ನು ಮುಂಡೂರು ಕಂಪ ನಿವಾಸಿ ದಿ.ಗುರುವಪ್ಪ ಮತ್ತು ದೇವಕಿ ದಂಪತಿಗಳ ಪುತ್ರಿ ಜಯಶ್ರೀ (23) ಎಂದು ಗುರುತಿಸಲಾಗಿದೆ. ವ್ಯಕ್ತಿಯೋರ್ವ ಯುವತಿಗೆ ಚೂರಿ ಇರಿದಿದ್ದು, ಯುವತಿಯನ್ನು ಆಸ್ಪತ್ರೆಗೆ ಸಾಗಿಸುವಾಗ ದಾರಿ ಮಧ್ಯೆ ಸಾವನ್ನಪ್ಪಿದ್ದಾಳೆ ಎನ್ನಲಾಗಿದೆ.
ಜಯಶ್ರೀ ಈ ಮೊದಲು ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಲ್ಲಿ ಕೆಲಸ ನಿರ್ವಹಿಸುತ್ತಿದ್ದು, ಕೆಲ ಸಮಯದಿಂದ ಕೆಲಸ ಬಿಟ್ಟು ಮನೆಯಲ್ಲಿಯೇ ಇದ್ದಳು ಎಂದು ತಿಳಿದು ಬಂದಿದೆ. ಯುವತಿಯ ಮೃತದೇಹವನ್ನು ಪುತ್ತೂರಿನ ಸರಕಾರಿ ಆಸ್ಪತ್ರೆಯಲ್ಲಿರಿಸಲಾಗಿದ್ದು, ಸಂಪ್ಯ ಪೊಲೀಸರು ಆಗಮಿಸಿ ತನಿಖೆ ನಡೆಸುತ್ತಿದ್ದಾರೆ.
You must be logged in to post a comment Login