DAKSHINA KANNADA
ಪುತ್ತೂರು – ಟ್ಯಾಂಕರ್ ಡಿಕ್ಕಿ ಹೊಡೆದ ಸ್ಕೂಟರ್ – ಸವಾರ ಸಾವು

ಪುತ್ತೂರು ಜುಲೈ 24: ಟ್ಯಾಂಕರ್ ಹಾಗೂ ವಿಕಲಚೇತನರೊಬ್ಬರ ತ್ರಿವೀಲ್ಹರ್ ಸ್ಕೂಟರ್ ನಡುವೆ ನಡೆದ ಭೀಕರ ರಸ್ತೆ ಅಪಘಾತದಲ್ಲಿ ಸ್ಕೂಟರ್ ಸವಾರ ಸಾವನಪ್ಪಿದ ಘಟನೆ ನೆಹರುನಗರ ಮಂಜಲ್ಪಡ್ಡು ಬಳಿಯ ಮಂಗಲ ಸ್ಟೋರ್ಸ್ ಮುಂಭಾಗ ನಿನ್ನೆ ನಡೆದಿದೆ.
ಮೃತರನ್ನು ಮಿತ್ತೂರು ನಿವಾಸಿ ಶಿವರಾಮ ನಾಯ್ಕ (50) ಎಂದು ಗುರುತಿಸಲಾಗಿದೆ. ಮಂಗಳೂರು ಕಡೆ ಹೋಗುತ್ತಿದ್ದ ಟ್ಯಾಂಕರ್ ಗೆ ವೇಗವಾಗಿ ಬಂದ ಸ್ಕೂಟರ್ ಡಿಕ್ಕಿ ಹೊಡೆದಿದೆ. ಡಿಕ್ಕಿಯ ರಭಸಕ್ಕೆ ತೀವ್ರ ಗಾಯಗೊಂಡ ಸವಾರ ಮೃತ ಪಟ್ಟಿದ್ದಾರೆ. ಪುತ್ತೂರಿನ ಸಂಚಾರಿ ಠಾಣೆಯ ಪೊಲೀಸರು ಘಟನಾ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ಮಾಡಿ ಪ್ರಕರಣ ದಾಖಲಿಸಿದ್ದಾರೆ. ಘಟನೆಯ ಸಿಸಿಟಿವಿ ವಿಡಿಯೋ ಲಭ್ಯವಾಗಿದ್ದು, ಘಟನೆ ಭೀಕರತೆ ತೋರಿಸುತ್ತಿದೆ.
